ಜೂ.27ರಿಂದ ಎಸೆಸೆಲ್ಸಿ ಪೂರಕ ಪರೀಕ್ಷೆ

Update: 2022-06-25 17:52 GMT
ಫೈಲ್ ಚಿತ್ರ

ಬೆಂಗಳೂರು, ಜೂ.25: 2021-22ನೇ ಸಾಲಿನ ಎಸೆಸೆಲ್ಸಿ ಪೂರಕ ಪರೀಕ್ಷೆ ಜೂ.27 ರಿಂದ ಜು.4ರವರೆಗೆ ನಡೆಯಲಿದ್ದು, ಪರೀಕ್ಷೆಗೆ 11,450 ಶಾಲೆಗಳಿಂದ 94,649 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪೂರಕ ಪರೀಕ್ಷೆಯು ರಾಜ್ಯದ 423 ಕೇಂದ್ರಗಳಲ್ಲಿ ನಡೆಯಲಿದ್ದು, ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ತೆಗೆದುಕೊಂಡಿರುವುದಾಗಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ತಿಳಿಸಿದೆ. 

ಪರೀಕ್ಷೆಯನ್ನು ಬರೆಯುತ್ತಿರುವ ಒಟ್ಟು ವಿದ್ಯಾರ್ಥಿಗಳ ಪೈಕಿ 63,363 ಗಂಡು ವಿದ್ಯಾರ್ಥಿಗಳು, 31,283 ಹೆಣ್ಣು ವಿದ್ಯಾರ್ಥಿಗಳು ಹಾಗೂ ಮೂವ್ವರು ತೃತೀಯ ಲಿಂಗಿ ವಿದ್ಯಾರ್ಥಿಗಳಾಗಿದ್ದಾರೆ. ಕೋವಿಡ್ ಸೊಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರಕಾರವು ಹೊರಡಿಸಿರುವ ಎಸ್‍ಓಪಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ. 

ಮೌಲ್ಯಮಾಪನ ಕಾರ್ಯವು ಜು.11 ರಿಂದ ರಾಜ್ಯದ 5 ಜಿಲ್ಲೆಗಳ 28 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಯಲಿದೆ. ಆಗಸ್ಟ್ ಮೊದಲ ವಾರದಲ್ಲಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News