ಮಹಾರಾಷ್ಟ್ರ ಬಿಕ್ಕಟ್ಟು: ಶಿವಸೇನೆಯ 15 ಬಂಡಾಯ ಶಾಸಕರಿಗೆ ಕೇಂದ್ರದಿಂದ ವೈ-ಪ್ಲಸ್ ಸಿಆರ್‌ಪಿಎಫ್ ರಕ್ಷಣೆ

Update: 2022-06-26 09:08 GMT
Photo: PTI

ಹೊಸದಿಲ್ಲಿ: ಕನಿಷ್ಠ 15 ಶಿವಸೇನೆಯ ಬಂಡಾಯ ಶಾಸಕರಿಗೆ ಸಿಆರ್‌ಪಿಎಫ್ ಕಮಾಂಡೋಗಳ ವೈ-ಪ್ಲಸ್ ಭದ್ರತೆಯನ್ನು ಕೇಂದ್ರ ಸರಕಾರ ರವಿವಾರ ವಿಸ್ತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತೆ ಪಡೆದವರಲ್ಲಿ ರಮೇಶ್ ಬೋರ್ನಾರೆ, ಮಂಗೇಶ್ ಕುಡಾಲ್ಕರ್, ಸಂಜಯ್ ಶಿರ್ಸಾತ್, ಲತಾಬಾಯಿ ಸೋನಾವಾನೆ, ಪ್ರಕಾಶ್ ಸುರ್ವೆ ಹಾಗೂ  ಇತರ 10 ಮಂದಿ ಸೇರಿದ್ದಾರೆ.

ಮಹಾರಾಷ್ಟ್ರದಲ್ಲಿ ವಾಸಿಸುವ ಅವರ ಕುಟುಂಬಗಳಿಗೆ ಭದ್ರತೆಯನ್ನು ನೀಡಲಾಗುತ್ತದೆಎಂದು ಅವರು ಹೇಳಿದರು.

ಮಹಾರಾಷ್ಟ್ರದ ಪ್ರಸ್ತುತ ರಾಜಕೀಯ ಸನ್ನಿವೇಶದಿಂದಾಗಿ ಶಾಸಕರು ಹಾಗೂ  ಅವರ ಕುಟುಂಬಗಳು ತಮ್ಮ ದೈಹಿಕ ಭದ್ರತೆಗೆ ಸಂಭಾವ್ಯ ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ಕೇಂದ್ರ ಭದ್ರತಾ ಏಜೆನ್ಸಿಗಳು ಗೃಹ ಸಚಿವಾಲಯಕ್ಕೆ ಮಾಡಿದ ಶಿಫಾರಸಿನ ಮೇರೆಗೆ ಶಾಸಕರಿಗೆ ಭದ್ರತೆಯನ್ನು ಮಂಜೂರು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು ನಾಲ್ಕರಿಂದ ಐದು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಕಮಾಂಡೋಗಳು, ಪಾಳಿಯಲ್ಲಿ, ಪ್ರತಿ ಶಾಸಕರು ಮಹಾರಾಷ್ಟ್ರಕ್ಕೆ ಬಂದ ನಂತರ ಅವರನ್ನು ರಕ್ಷಿಸುತ್ತಾರೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News