ಮಾದಕ ದ್ರವ್ಯ ಸೇವನೆ ವ್ಯಸನ ವಿರುದ್ಧ ಸಂಘಟಿತ ಹೋರಾಟ ಅಗತ್ಯ: ಗೃಹಸಚಿವ ಆರಗ ಜ್ಞಾನೇಂದ್ರ

Update: 2022-06-26 08:52 GMT

ಶಿವಮೊಗ್ಗ, ಜೂ.26: ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ಹಾಗೂ ಕಳ್ಳ ಸಾಗಣೆ ವಿರುದ್ಧ ರಾಜ್ಯ ಸರಕಾರ ಕಠಿಣ ಕ್ರಮ ಜರುಗಿಸುತ್ತಿದ್ದು, ಅಭಿಯಾನದ ರೂಪದಲ್ಲಿ ಪಿಡುಗಿನ ವಿರುದ್ಧ ಹೋರಾಟ ನಡೆಸಲು ಸಮಾಜದ ಎಲ್ಲಾ ವರ್ಗದ ಜನತೆ ಕೈ ಜೋಡಿಸಬೇಕು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜ್ಯದಲ್ಲಿ ಕಳೆದ ವರ್ಷ ಸುಮಾರು 8,505 ಮೊಕದ್ದಮೆಗಳನ್ನು ದಾಖಲಿಸಿ  ಕೋಟ್ಯಂತರ ರೂಪಾಯಿ ಮೌಲ್ಯದ ಮಾದದ್ರವ್ಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು

ಕಳೆದ 12 ತಿಂಗಳ ಅವಧಿಯಲ್ಲಿ ಒಟ್ಟು 7,846 ಮಂದಿಯನ್ನು ಬಂಧಿಸಲಾಗಿದೆ ಎಂದೂ ತಿಳಿಸಿದ ಸಚಿವರು, ವಶಪಡಿಸಿಕೊಳ್ಳಲಾದ ಮಾದಕ ದ್ರವ್ಯ ಸರಕನ್ನು ನ್ಯಾಯಾಲಯದಿಂದ ಅನುಮತಿ ಪಡೆದು ನಾಶಪಡಿಸಲಾಗುವುದು ಎಂದರು.

ದೇಶದೊಳಕ್ಕೆ ಮಾದಕ ದ್ರವ್ಯ ವಸ್ತುಗಳನ್ನು ಅಕ್ರಮವಾಗಿ ಸಾಗಿಸಿ ದೇಶದ ಯುವ ಜನತೆಯನ್ನು ಗುರಿ ಮಾಡಿಕೊಂಡು  ಸಮಾಜವನ್ನು ದುರ್ಬಲಗೊಳಿಸುವ ಹುನ್ನಾರ ಇದೆ ಎಂದು ಎಚ್ಚರಿಸಿದ ಗೃಹ ಸಚಿವರು, ರಾಜ್ಯ ಗೃಹ ಇಲಾಖೆ ಮಾದಕ ವಸ್ತುಗಳ ವಿರುದ್ಧ ಜನ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News