ಉಚಿತ ಮದ್ಯವ್ಯಸನ ವಿಮುಕ್ತಿ -ವಸತಿ ಶಿಬಿರದ ಉದ್ಘಾಟನೆ

Update: 2022-06-26 12:40 GMT

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಮಲಾ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಪ್ರಾಯೋಜಕತ್ವದಲ್ಲಿ ೩೦ನೇ ಉಚಿತ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರದ ಉದ್ಘಾಟನಾ ಸಮಾರಂಭವು ರವಿವಾರ ಆಸ್ಪತ್ರೆಯಲ್ಲಿ ನಡೆಯಿತು.

ಶಿಬಿರವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ನಶೆ ಮುಕ್ತ ಅಭಿಯಾನದ ಅಂಗವಾಗಿ ಯುವ ಜನತೆಯಲ್ಲಿ ಮದ್ಯ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಿರುಚಿತ್ರ  ಬಿಡುಗಡೆ ಗೊಳಿಸಿದರು. ಅಧ್ಯಕ್ಷತೆ ವಹಿಸಿದ್ದ ಡಾ.ಎ.ವಿ. ಬಾಳಿಗಾ ಸಮೂಹ ಸಂಸ್ಥೆ ನಿರ್ದೇಶಕ ಮತ್ತು ಮನೋವೈದ್ಯ ಡಾ.ಪಿ.ವಿ. ಭಂಡಾರಿ, ಕುಡಿತದ ಹಿಂತೆಗೆತದ ಚಿಹ್ನೆಗಳು ಮತ್ತು ಮಾನಸಿಕ ಸಮಸ್ಯೆಗಳು ಮತ್ತು ಅದರ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.

ಅತಿಥಿಗಳಾಗಿ ಉಡುಪಿ ಹಿರಿಯ ಸಿವಿಲ್ ನ್ಯಾಯಾಧೀಶೆ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ವೀಣಾ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಪ ನಿರ್ದೇಶಕಿ ರತ್ನಾ ಉಪಸ್ಥಿತರಿದ್ದರು.

ಮನೋವೈದ್ಯ ಡಾ.ಮಾನಸ್ ಸ್ವಾಗತಿಸಿದರು. ಡಾ.ವಿರೂಪಾಕ್ಷ ದೇವರಮನೆ  ವಂದಿಸಿದರು. ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಮತ್ತು ಪದ್ಮ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News