ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2022-06-26 15:27 GMT

ಬೆಂಗಳೂರು, ಜೂ. 26: ನೈಋತ್ಯ ಮುಂಗಾರಿನ ಪರಿಣಾಮ ಜೂ.27 ಮತ್ತು 28ರಂದು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News