ಕೋಡಿ: 10ನೆ ಹಂತದ ಸ್ವಚ್ಛ ಕಡಲ ತೀರ-ಹಸಿರು ಕೋಡಿ ಅಭಿಯಾನ

Update: 2022-06-26 15:48 GMT

ಕುಂದಾಪುರ : ಕೋಡಿಯ ಬ್ಯಾರೀಸ್ ವಿದ್ಯಾ ಸಂಸ್ಥೆಗಳು ಮುನ್ನಡೆಸುತ್ತಿರುವ ಸ್ವಚ್ಛ ಕಡಲ ತೀರ- ಹಸಿರು ಕೋಡಿಯ 10ನೆ ಹಂತ ಕಾರ್ಯಕ್ರಮವು ರವಿವಾರ ಯಶಸ್ವಿಯಾಗಿ ನಡೆಯಿತು.

ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಮತ್ತು ನಿಸರ್ಗ ಪ್ರಿಯರು ಈ ಅಭಿಯಾನದಲ್ಲಿ ಪಾಲ್ಗೊಂಡು, ಕಡಲ ತೀರವನ್ನು ಸ್ವಚ್ಛಗೊಳಿಸಿದರು.

ಈ ಕಾರ್ಯದಲ್ಲಿ ಸಹಕಾರ ನೀಡುತ್ತಿರುವ ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಹಾಗೂ ಪದಾಧಿಕಾರಿಗಳಿಗೆ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರಿಗೆ ಬ್ಯಾರೀಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರಹ್ಮಾನ್ ಕೃತಜ್ಞತೆ ಸಲ್ಲಿಸಿದ್ದಾರೆ.‌

ಇದು ನಿಸರ್ಗ ಸಂರಕ್ಷಣೆಯ ಕೆಲಸ, ನಮ್ಮ ಉಳಿವಿಗಾಗಿ ನಾವು  ಮಾಡುತ್ತಿರುವ ಕೆಲಸ ಎಂದು ಹೇಳುತ್ತಾ ಇದರಲ್ಲಿ ಪಾಲ್ಗೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಮತ್ತು ಎಲ್ಲಾ ಸಹೃದಯಿಗಳಿಗೆ ಬ್ಯಾರೀಸ್ ಗ್ರೂಪ್ ಅಧ್ಯಕ್ಷ ಸಯ್ಯದ್ ಮೊಹಮ್ಮದ್ ಬ್ಯಾರಿ ಅಭಿನಂದನೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News