ದಲಿತರನ್ನು ಸಿಎಂ ಮಾಡುವ ಬಗ್ಗೆ ಡಿಕೆಶಿ ಹೇಳಿಕೆ ಕುರಿತು ನಿಮ್ಮ ಅಭಿಪ್ರಾಯವೇನು?: ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ

Update: 2022-06-27 05:50 GMT

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರು ದಲಿತರನ್ನು ಸಿಎಂ ಮಾಡುವ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ? ದಲಿತರನ್ನು ಸಿಎಂ ಮಾಡುವ ಬದ್ಧತೆ ನಿಜಕ್ಕೂ ಕಾಂಗ್ರೆಸ್‌ ಪಕ್ಷಕ್ಕಿದೆಯೇ? ಎಂದು ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ ಮಾಡಿದೆ. 

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ,  'ನಿಮಗೆ ನಿಜಕ್ಕೂ‌ ದಲಿತರ ಮೇಲೆ ಕಾಳಜಿಯಿದ್ದರೆ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಲಿತರನ್ನೇ ಸಿಎಂ‌ ಮಾಡುತ್ತೇವೆ ಎಂದು ಘೋಷಿಸಿ. ಆಷಾಢಭೂತಿತನದ ಪ್ರದರ್ಶನವೇಕೆ?' ಎಂದು ಇದೇ ವೇಳೆ ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನೂ ಪ್ರಶ್ನೆ ಮಾಡಿದೆ. 

'ದಲಿತರು ಮುಖ್ಯಮಂತ್ರಿ ಆದರೆ ತಪ್ಪೇನು ಎಂದು ಅಕಾಲದಲ್ಲಿ ವಾದ ಮಾಡುವ ಕಾಂಗ್ರೆಸ್‌ ನಾಯಕರಿಗೆ ಅಧಿಕಾರದಲ್ಲಿ ಇದ್ದಾಗ ದಲಿತರ ಮೇಲಿನ ಕಾಳಜಿ‌ ಮರೆತು ಹೋಗುತ್ತದೆ. ಇದಕ್ಕೆ ಸಿದ್ದರಾಮಯ್ಯನವರೂ ಹೊರತಲ್ಲ, ಡಿಕೆಶಿಯೂ ಅಪವಾದವಲ್ಲ. ಅಧಿಕಾರಕ್ಕಾಗಿ ಓಲೈಕೆ ರಾಗವಷ್ಟೇ' ಎಂದು ಬಿಜೆಪಿ ಟ್ವೀಟ್ ಮಾಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News