ರಾಜ್ ಠಾಕ್ರೆ ಜೊತೆ ದೂರವಾಣಿ ಮೂಲಕ ಚರ್ಚಿಸಿದ ಬಂಡಾಯ ನಾಯಕ ಏಕನಾಥ್ ಶಿಂಧೆ: ವರದಿ

Update: 2022-06-27 06:12 GMT
ರಾಜ್ ಠಾಕ್ರೆ, Photo:PTI

ಹೊಸದಿಲ್ಲಿ: ಪಕ್ಷದ ಮುಖ್ಯಸ್ಥ  ಹಾಗೂ  ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಭಾರೀ ಬಂಡಾಯ ಸಾರಿರುವ  ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಠಾಕ್ರೆ ಅವರ ಸಂಬಂಧಿ ರಾಜ್ ಠಾಕ್ರೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಏಕನಾಥ್ ಶಿಂಧೆ ಅವರು ರಾಜ್ ಠಾಕ್ರೆ ಅವರೊಂದಿಗೆ ಎರಡು ಬಾರಿ ಮಾತನಾಡಿದ್ದಾರೆ.  ಮಹಾರಾಷ್ಟ್ರದ ಇತ್ತೀಚಿನ ರಾಜಕೀಯ ಪರಿಸ್ಥಿತಿ ಹಾಗೂ  ಅವರ ಆರೋಗ್ಯದ ಬಗ್ಗೆ ಚರ್ಚಿಸಿದ್ದಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್‌ಎಸ್) ನಾಯಕರೊಬ್ಬರು ತಿಳಿಸಿದ್ದಾರೆ.

ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರನ್ನು ನಿನ್ನೆ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು ಹಾಗೂ  ಶಿಂಧೆ ಅವರ ಆರೋಗ್ಯವನ್ನು ವಿಚಾರಿಸಿದರು ಎಂದು ನಾಯಕ ಹೇಳಿದರು.

"ಶಿವಸೇನೆ ಬಂಡಾಯ ಶಾಸಕ ಏಕನಾಥ್ ಶಿಂಧೆ ಅವರು ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರೊಂದಿಗೆ ಎರಡು ಬಾರಿ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಶಿಂಧೆ ಅವರು ಮಹಾರಾಷ್ಟ್ರದ ಇತ್ತೀಚಿನ ರಾಜಕೀಯ ಪರಿಸ್ಥಿತಿಯ ಬಗ್ಗೆ ಠಾಕ್ರೆ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ" ಎಂದು ಎಂಎನ್‌ಎಸ್  ನಾಯಕನ ಹೇಳಿಕೆ ಉಲ್ಲೇಖಿಸಿ  ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ರಾಜ್ ಠಾಕ್ರೆ ಅವರು ಶಿವಸೇನೆಯನ್ನು ತೊರೆದು 2006 ರಲ್ಲಿ ತಮ್ಮದೇ ಆದ ಪಕ್ಷವನ್ನು ಸ್ಥಾಪಿಸಿದ್ದರು. ಸೋದರ ಸಂಬಂಧಿಗಳಾದ ಉದ್ಧವ್ ಹಾಗೂ  ರಾಜ್ ಠಾಕ್ರೆ ಕೆಲವು ಕಾರಣದಿಂದಾಗಿ ಬೇರ್ಪಟ್ಟಿದ್ದರು. ಆಗಾಗ್ಗೆ ವಾಗ್ದಾಳಿ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News