×
Ad

ಮಂಗಳೂರು: ಚಿನ್ನ ಅಕ್ರಮ ಸಾಗಾಟ ಆರೋಪ; ಓರ್ವ ಸೆರೆ

Update: 2022-06-27 18:17 IST

ಮಂಗಳೂರು, ಜೂ. 27: ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿ ಕಾಸರಗೋಡು ಮೂಲದವನೆಂದು ತಿಳಿದುಬಂದಿದ್ದು, ಈತನ ಬಳಿಯಿದ್ದ 24 ಕ್ಯಾರೆಟ್ ನ 60.24 ಲಕ್ಷ‌ ರೂ. ಮೌಲ್ಯದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಇಂಡಿಗೋ ವಿಮಾನದ ಮೂಲಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಆರೋಪಿಯನ್ನು ತಪಾಸಣೆಗೆ ಒಳಪಡಿಸಿದಾಗ ಆತನ ಗುದದ್ವಾರದಲ್ಲಿ 4 ಅಂಡಾಕಾರದಲ್ಲಿ ಪ್ಯಾಕೆಟ್ ಗಳಲ್ಲಿ ತುಂಬಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಕ್ಕೆ ಪಡೆದು ಕೊಂಡಿದ್ದಾರೆ ಅಲ್ಲದೆ ಆರೋಪಿಯನ್ನು ಅಧಿಕಾರಿಗಳು ಬಂಧಿಸಿ ತನಿಖೆ ಮುಂದುವರಿದಿದೆ ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News