ಜು.1ರಿಂದ ಬೈಂದೂರು ವ್ಯಾಪ್ತಿಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಷೇಧ

Update: 2022-06-27 15:14 GMT

ಉಡುಪಿ : ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲೇಟ್, ಪ್ಲಾಸ್ಟಿಕ್ ಧ್ವಜ, ಪ್ಲಾಸ್ಟಿಕ್ ಕಪ್, ಪ್ಲಾಸ್ಟಿಕ್ ಸ್ಪೂನ್, ಅಂಟಿಕೊಳ್ಳುವ ಫಿಲ್ಮ್, ಎಲ್ಲಾ ದಪ್ಪದ ಡೈನಿಂಗ್ ಟೇಬಲ್ ನಲ್ಲಿ ಹರಡುವ ಬಳಸುವ ಪ್ಲಾಸ್ಟಿಕ್ ಹಾಳೆ, ಸ್ಟ್ರಾ, ಥರ್ಮಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳ ಜೊತೆಗೆ ಹೆಚ್ಚುವರಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಸ್ಟಿಕ್‌ಗಳೊಂದಿಗೆ ಇಯರ್ ಬಡ್, ಬಲೂನ್‌ಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್, ಪ್ಲಾಸ್ಟಿಕ್ ಧ್ವಜ, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್, ಪ್ಲಾಸ್ಟಿಕ್ ಐಸ್‌ಕ್ರೀಮ್ ಸ್ಟಿಕ್, ಅಲಂಕಾರಕ್ಕಾಗಿ ಬಳಸುವ ಪಾಲಿಸೈರೀನ್ (ಥರ್ಮಾಕೋಲ್), ಪ್ಲಾಸ್ಟಿಕ್ ಪ್ಲೇಟ್, ಪ್ಲಾಸ್ಟಿಕ್ ಕಪ್ ಮತ್ತು ಲೋಟ, ಫೋರ್ಕ್, ಪ್ಲಾಸ್ಟಿಕ್ ಚಮಚ, ಪ್ಲಾಸ್ಟಿಕ್ ಚಾಕು, ಪ್ಲಾಸ್ಟಿಕ್ ಟ್ರೇಗಳಂತಹ ಕಟ್ಲರಿ, ಸ್ವೀಟ್ ಬಾಕ್ಸ್‌ಗಳ ಸುತ್ತ ಸುತ್ತುವ ಅಥವಾ ಪ್ಯಾಕಿಂಗ್ ಫಿಲ್ಮ್, ಆಮಂತ್ರಣ ಪತ್ರ ಮತ್ತು ಸಿಗರೇಟ್ ಪ್ಯಾಕೆಟ್, ೧೦೦ ಮೈಕ್ರಾನ್‌ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ಅಥವಾ ಪಿವಿಸಿ ಬ್ಯಾನರ್ ಹಾಗೂ ಪ್ಲಾಸ್ಟಿಕ್ ಸ್ಟಿಕ್ಕರ್‌ಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಜುಲೈ 1 ರಿಂದ ನಿಷೇಧಿಸಲಾಗಿದೆ.

ಮೇಲಿನ ಎಲ್ಲಾ ವಸ್ತುಗಳ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ವ್ಯಾಪಾರಿಗಳು, ಅಂಗಡಿ ಮಾಲಕರು, ಇ-ಕಾಮರ್ಸ್ ಕಂಪೆನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು, ಮಾಲ್, ಮಾರುಕಟ್ಟೆ ಸ್ಥಳ, ಶಾಪಿಂಗ್ ಕೇಂದ್ರಗಳು, ಸಿನಿಮಾ ಮನೆ, ಪ್ರವಾಸೋದ್ಯಮ ಸ್ಥಳ, ಶಾಲಾ-ಕಾಲೇಜು, ಕಛೇರಿ ಸಂಕೀರ್ಣ, ಆಸ್ಪತ್ರೆ ಇತರ ಸಂಸ್ಥೆಗಳು ಮತ್ತು ಸಾಮಾನ್ಯ ಸಾರ್ವಜನಿಕರು ಏಕ ಬಳಕೆಯ ಪ್ಲಾಸ್ಟಿಕ್ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಲ್ಲಿಸಬೇಕು.

ಜೂನ್ ೩೦ರೊಳಗೆ ಮೇಲೆ ತಿಳಿಸಲಾದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ಶೂನ್ಯ ದಾಸ್ತಾನುಗಳನ್ನು ಖಚಿತ ಪಡಿಸಿಕೊಳ್ಳಲು ಸಂಬಂಧಿಸಿದ ಘಟಕಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News