ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2022-06-27 16:41 GMT

ಬೆಂಗಳೂರು, ಜೂ.27: ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿದ್ದ ಡಾ.ಶಮ್ಲಾ ಇಕ್ಬಾಲ್ ಅವರನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತರನ್ನಾಗಿ, ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಬಿ.ಬಿ.ಕಾವೇರಿ ಅವರನ್ನು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಆರ್.ವಿನೋತ್ ಪ್ರಿಯಾ ಅವರನ್ನು ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News