ಸಾರಿಗೆ ವ್ಯವಸ್ಥೆಯ ಇತಿಹಾಸದಲ್ಲೇ ಡೀಸೆಲ್ ಇಲ್ಲದೆ ಬಸ್ಸುಗಳು ನಿಲ್ಲುವ ಸ್ಥಿತಿ ಇದೇ ಮೊದಲು: ಕಾಂಗ್ರೆಸ್

Update: 2022-06-28 09:22 GMT
ಫೈಲ್ ಚಿತ್ರ

ಬೆಂಗಳೂರು: ಬಿಎಂಟಿಸಿಗೆ (BMTC) ಇದೀಗ ಡೀಸೆಲ್‌ಗಾಗಿ ಪರದಾಡುವ ಸ್ಥಿತಿ ಎದುರಾಗಿದ್ದು,  'ರಾಜ್ಯದ ಸಾರಿಗೆ ವ್ಯವಸ್ಥೆಯ ಇತಿಹಾಸದಲ್ಲೇ ಡೀಸೆಲ್ ಇಲ್ಲದೆ ಬಸ್ಸುಗಳು ನಿಲ್ಲುವ ಸ್ಥಿತಿ ಒದಗಿದ್ದು ಇದೇ ಮೊದಲ ಬಾರಿ ' ಎಂದು  ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್,  'ಇಂತಹ ದುಸ್ಥಿತಿಗೆ ಬಿಎಂಟಿಸಿಯನ್ನು ತಂದಿಟ್ಟಿದ್ದಕ್ಕೆ ಸಾರಿಗೆ ಸಚಿವರನ್ನು ಸನ್ಮಾನಿಸಬೇಕೇನೋ!! ತೈಲ ಕಂಪೆನಿಗಳ ಎದುರು ಹೆದರಿ ಕುಳಿತಿರುವ ಸರ್ಕಾರದ ಅಸಾಮರ್ಥ್ಯಕ್ಕೆ ಜನತೆ ಹಾಗೂ ಬಿಎಂಟಿಸಿ ಸಂಕಷ್ಟ ಎದುರಿಸಬೇಕಿದೆ' ಎಂದು ಕಾಂಗ್ರೆಸ್ ಹೇಳಿದೆ.

'ಬಿಎಂಟಿಸಿಗೆ ಡೀಸೆಲ್ ಪೂರೈಸಿದರೆ ಪರವಾನಗಿ ರದ್ದುಪಡಿಸುವುದಾಗಿ ವ್ಯಾಪಾರಿಗಳಿಗೆ ಕಂಪನಿಗಳು ಬೆದರಿಕೆ ಹಾಕುತ್ತಿವೆ. ಇದರಿಂದಾಗಿ ವ್ಯಾಪಾರಿಗಳು ನಮಗೆ ಡೀಸೆಲ್ ಪೂರೈಸಲು ಹೆದರುತ್ತಿದ್ದಾರೆ’ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ ಸೋಮವಾರ ಹೇಳಿಕೆ ನೀಡಿದ್ದರು. 

ಡಿಪೊಗಳಿಗೆ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್‌ಗಳ ಬಳಿ ಬಿಎಂಟಿಸಿ ಬಸ್‌ಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News