×
Ad

ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ

Update: 2022-06-28 17:46 IST
ಫೈಲ್ ಚಿತ್ರ

ಬೆಂಗಳೂರು, ಜೂ.28: ನೈಋತ್ಯ ಮುಂಗಾರಿನ ಪರಿಣಾಮ ಜೂ.29, 30ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಜೂ.29, 30ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ಕೊಟ್ಟಿದೆ. 

ಉತ್ತರ ಕರ್ನಾಟಕದ ಭಾಗದ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News