ತೀಸ್ತಾ ಸೆಟಲ್ವಾಡ್‌ ರ ಪದ್ಮಶ್ರೀ ವಾಪಸ್ ಪಡೆಯುವಂತೆ ಮಧ್ಯಪ್ರದೇಶ ಗೃಹಸಚಿವ ಮನವಿ

Update: 2022-06-28 13:03 GMT

ಭೋಪಾಲ್: ಗುಜರಾತ್‍ನಲ್ಲಿ 2002ರಲ್ಲಿ ನಡೆದ ಹಿಂಸಾಚಾರ ಸಂಬಂಧಿತ ಪ್ರಕರಣದಲ್ಲಿ ಸುಳ್ಳು ಸಾಕ್ಷ್ಯ ಸೃಷ್ಟಿಸಿದ್ದಾರೆ ಹಾಗೂ ಫೋರ್ಜರಿ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತೆ ಟೀಸ್ಟಾ ಸೇಟಲ್ವಾಡ್ ಅವರಿಗೆ 2007ರಲ್ಲಿ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಬೇಕೆಂದು ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಆಗ್ರಹಿಸಿದ್ದಾರೆ.

"ಆಕೆ ಅವಾರ್ಡ್ ವಾಪ್ಸಿ ಗ್ಯಾಂಗ್ ಸದಸ್ಯೆಯಾಗಿದ್ದರು. ಇಂತಹ ಜನರ ವಿರುದ್ಧ ಸುಪ್ರೀಂ ಕೋರ್ಟ್ ಹೇಳಿಕೆಗಳ ಹಿನ್ನೆಲೆಯಲ್ಲಿ ಹಾಗೂ ಪ್ರಶ್ನಾರ್ಹ ನಡವಳಿಕೆ ಹೊಂದಿರುವ ಇಂತಹವರಿಗೆ ನೀಡಲಾದ ಪ್ರಶಸ್ತಿಯನ್ನು ವಾಪಸ್ ಪಡೆಯಬೇಕು" ಎಂದು ಅವರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News