ಉದಯಪುರ ಹತ್ಯೆ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿದ್ದರಾಮಯ್ಯ ಆಗ್ರಹ

Update: 2022-06-28 17:07 GMT

ಬೆಂಗಳೂರು:  ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಇಂದು (ಮಂಗಳವಾರ) ರಾಜಸ್ತಾನದ ಉದಯ್‌ಪುರದ ಮಾಲ್ದಾಸ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬನ ಹತ್ಯೆ ಮಾಡಲಾಗಿದ್ದು, ಅಂತಹ ಕ್ರೌರ್ಯವನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮ್ಯ,  ಉದಯಪುರದಲ್ಲಿ ಅಮಾಯಕನ ಶಿರಚ್ಛೇದ ಮಾಡಿದ ಬರ್ಬರ ಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಅಂತಹ ಕ್ರೌರ್ಯವನ್ನು  ಸಮರ್ಥಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.  

'ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ. ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ. ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಅಲ್ಲಿನ ರಾಜ್ಯ ಸರ್ಕಾರ ಕಾನೂನು ಕ್ರಮದ ಮೂಲಕ ಕೊಲೆಗಡುಕನಿಗೆ ಅತ್ಯುಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು' ಎಂದು ಆಗ್ರಹಿಸಿದ್ದಾರೆ.

ಹತ್ಯೆಯ ಬೆನ್ನಲ್ಲೇ ಉದಯಪುರದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು,  ಸದ್ಯ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News