ಮುದರಂಗಡಿ: ಶಾಸಕರಿಂದ ಅಹವಾಲು ಸ್ವೀಕಾರ

Update: 2022-06-28 17:23 GMT

ಪಡುಬಿದ್ರಿ: ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿದ್ದು, ಈ ಭಾಗಗಳಲ್ಲಿ ಹೆಚ್ಚಿನ ರಸ್ತೆಗಳು ಗ್ರಾಮೀಣ ಪ್ರದೇಶದ ಹಳ್ಳಿಗಳನ್ನು ಸಂಪರ್ಕಿಸುವ ರಸ್ತೆಗಳಾಗಿದ್ದು 11 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚಿನ ರಸ್ತೆಗಳನ್ನು ಈಗಾಗಲೇ ಅಭಿವೃದ್ಧಿ ಪಡಿಸಲಾಗಿದೆ ಹಾಗೂ ಸಾರ್ವಜನಿಕರ ಉಪಯೋಗಕ್ಕೆ ಬಿಟ್ಟುಕೊಡಲಾಗಿದೆ ಎಂದು ಶಾಸಕ ಲಾಲಾಜಿ ಮೆಂಡನ್ ಹೇಳಿದರು. 

ಮುದರಂಗಡಿ ಗ್ರಾಮ ಪಂಚಾಯತ್‍ಗೆ ಮಂಗಳವಾರ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ವಿವಿಧ ಇಲಾಖೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾರ್ವಜನಿಕರ  ಅಹವಾಲು ಸ್ವೀಕರಿಸಿ ಮಾತನಾಡಿದರು. 

ಈ ಸಂದರ್ಭದಲ್ಲಿ ಪಂಚಾಯತ್ ವ್ಯಾಪ್ತಿಯ 94ಸಿ ಹಕ್ಕುಪತ್ರ, ಬಸವ ವಸತಿ ಹಾಗೂ ಅಂಬೇಡ್ಕರ್ ನಿಗಮದ ವಸತಿ ಯೋಜನೆಯಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮನೆ ಮಂಜೂರಾತಿಯ ಮಂಜೂರಾತಿ ಪತ್ರವನ್ನು, ಪ್ರಾಕೃತಿಕ ವಿಕೋಪ ನಿಧಿ ಚೆಕ್, ವೃದ್ಧಪ್ಯಾ ವೇತನ, ವಿತರಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಯೋಗಿನಿ ಶೆಟ್ಟಿ, ಉಪಾಧ್ಯಕ್ಷ ಶರತ್ ಶೆಟ್ಟಿ , ಕಾಪು ಮುಖ್ಯಕಾರ್ಯನಿರ್ವಾಹಧಿಕಾರಿ ಶಿವಪ್ರಕಾಶ್, ಕಾಪು ಕಂದಾಯ ನಿರೀಕ್ಷಕರು ಸುಧೀರ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್, ಕಾಪು ಕೃಷಿ ಅಧಿಕಾರಿ ಶೇಖರ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಪ್ರಸಾದ್, ಪ್ರೌಢ ಶಾಲಾ ವಿಭಾಗ ಮುಖ್ಯಶಿಕ್ಷಕಿ ಪುಷ್ಪವತಿ, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಸುಬ್ರಮಣ್ಯ, ಮೆಸ್ಕಾಂ ಅಧಿಕಾರಿಗಳು, ಗ್ರಾಮ ಲೆಕ್ಕಧಿಕಾರಿ ಜಗದೀಶ್, ಹಾಗೂ ಇನ್ನಿತರ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಅಧಿಕಾರಿಗಳು,  ಪ್ರಮುಖರಾದ ಶಿವರಾಮ ಭಂಡಾರಿ, ರವೀಂದ್ರ ಪ್ರಭು, ಸಚಿನ್ ಭಂಡಾರಿ , ರಾಜೇಶ್ ಶೆಟ್ಟಿ,ಉದಯ ಮೂಲ್ಯ, ಪ್ರತೀಕ್ ಹೆಗ್ಡೆ , ಹರೀನಾಕ್ಷ ಶೆಟ್ಟಿ, ಸಾರ್ವಜನಿಕರು ಹಾಗೂ ವಿವಿಧ ಯೋಜನೆಗಳ ಅರ್ಹ ಫಲಾನುಭವಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News