ರಾಜ್ಯದಲ್ಲಿ ಮಂಗಳವಾರ 968 ಮಂದಿಗೆ ಕೊರೋನ ದೃಢ, ಓರ್ವ ಮೃತ್ಯು

Update: 2022-06-28 18:18 GMT

ಬೆಂಗಳೂರು, ಜೂ.28: ರಾಜ್ಯದಲ್ಲಿ ಮಂಗಳವಾರ 968 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಒಬ್ಬರು ಮೃತಪಟ್ಟಿದ್ದು, 337 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,66,420ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,073ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 4,918ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. 
ಒಬ್ಬರ ಸಾವು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೋನದಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ. 
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 968 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 3, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 3, ಬೆಂಗಳೂರುನಗರ 887, ಬೀದರ್ 2, ಚಿಕ್ಕಮಗಳೂರು 3, ದಕ್ಷಿಣಕನ್ನಡ 21, ಧಾರವಾಡ 10, ಹಾಸನ 2, ಹಾವೇರಿ 1, ಮೈಸೂರು 14, ರಾಮನಗರ 1, ಶಿವಮೊಗ್ಗ 1, ತುಮಕೂರು 1, ಉಡುಪಿ  ಜಿಲ್ಲೆಯಲ್ಲಿ 17 ಪ್ರಕರಣ ಪತ್ತೆಯಾಗಿವೆ.
 
ರಾಜಧಾನಿಯಲ್ಲಿ 887 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಮಂಗಳವಾರದಂದು 887 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 293 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 1801302  ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,967 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News