ಜು.1ರಿಂದ ಪ್ಲಾಸ್ಟಿಕ್ ನಿಷೇಧ

Update: 2022-06-28 18:28 GMT

ಮಂಗಳೂರು,ಜೂ.28: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಏಕ ಬಳಕೆಯ ಪ್ಲಾಸ್ಟಿಕ್ (ಎಸ್‌ಯುಪಿ) ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಸೂಚನೆ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳನ್ನು ಬಿಡುಗಡೆಗೊಳಿಸಿದೆ.

ಅದರಂತೆ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್‌ಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟ್‌ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್‌ಗಳು, ಪ್ಲಾಸ್ಟಿಕ್ ಸ್ಪೂನ್‌ಗಳು, ಅಂಟಿಕೊಳ್ಳುವ ಫಿಲ್ಮ್‌ಗಳು, ಡೈನಿಂಗ್ ಟೇಬಲ್‌ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಥರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ಜು.1ರಿಂದ ನಿಷೇಧಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಕೆ.ಕೀರ್ತಿಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News