×
Ad

ಮುಕೇಶ್ ಅಂಬಾನಿಗೆ ಸಂಬಂಧಿಸಿ ತ್ರಿಪುರಾ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Update: 2022-06-29 14:14 IST
Photo:PTI

ಹೊಸದಿಲ್ಲಿ: ಮುಂಬೈನಲ್ಲಿರುವ ಉದ್ಯಮಿ ಮುಖೇಶ್ ಅಂಬಾನಿ ಹಾಗೂ  ಅವರ ಕುಟುಂಬಕ್ಕೆ ನೀಡಿರುವ ಭದ್ರತೆಗೆ ಸಂಬಂಧಿಸಿದಂತೆ ಗೃಹ ಸಚಿವಾಲಯದ ಕಡತಗಳನ್ನು ಸಲ್ಲಿಸುವಂತೆ ತ್ರಿಪುರಾ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ  ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ರಜಾಕಾಲದ ಪೀಠವು ಹೈಕೋರ್ಟ್‌ನ ಆದೇಶಗಳನ್ನು ಪ್ರಶ್ನಿಸಿ ಕೇಂದ್ರ ಸರಕಾರ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ  ಮಧ್ಯಂತರ ಆದೇಶ ನೀಡಿದೆ.

ಕೇಂದ್ರದ ಪರವಾಗಿ ವಾದ ಮಂಡಿಸಿದ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ತ್ರಿಪುರಾ ಹೈಕೋರ್ಟ್‌ಗೆ ಈ ವಿಷಯವನ್ನು ಕೈಗೆತ್ತಿಕೊಳ್ಳಲು ಪ್ರಾದೇಶಿಕ ನ್ಯಾಯವ್ಯಾಪ್ತಿಯ ಕೊರತೆಯಿದೆ. ವ್ಯಕ್ತಿಗಳಿಗೆ ನೀಡಲಾದ ಭದ್ರತಾ ರಕ್ಷಣೆಯು ನ್ಯಾಯಾಂಗ ಪರಿಶೀಲನೆಯ ವಿಷಯವಾಗಿರಬಾರದು ಎಂದು ಹೇಳಿದರು. ಹೈಕೋರ್ಟ್ ಆದೇಶಗಳಿಗೆ ತಡೆಯಾಜ್ಞೆ ನೀಡುವಂತೆಯೂ ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News