ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಆರೋಪಿಗೆ 10 ವರ್ಷ ಶಿಕ್ಷೆ ವಿಧಿಸಿ ಆದೇಶಿಸಿದ ಕೋರ್ಟ್

Update: 2022-06-29 12:33 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.29: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ನಗರದ ಎಫ್‍ಟಿಎಸ್‍ಸಿ 4ನೆ ಕೋರ್ಟ್ 10 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ತಮಿಳುನಾಡು ಮೂಲದ ಆರೋಪಿ ವೆಂಕಟಸ್ವಾಮಿ(24)ಗೆ ನ್ಯಾಯಪೀಠವು ಶಿಕ್ಷೆ ವಿಧಿಸಿ ಆದೇಶಿಸಿದೆ. 7ನೆ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಮೇಲೆ ನೆರೆ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದ ಆರೋಪಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದನು.

ಈ ಬಗ್ಗೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಮಹದೇವಪುರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ತನಿಖೆ ಕೈಗೊಂಡು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಾಧಾರಗಳನ್ನು ಸಂಗ್ರಹಿಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಪೀಠವು ಆರೋಪಿ ತಪ್ಪಿತಸ್ಥನೆಂದು ಪರಿಗಣಿಸಿ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News