ಎರಡು ಸಾವಿರ ಅಗ್ನಿಶಾಮಕ ಹುದ್ದೆಗಳ ಭರ್ತಿ: ಸಚಿವ ಆರಗ ಜ್ಞಾನೇಂದ್ರ

Update: 2022-06-29 15:56 GMT

ಬೆಂಗಳೂರು, ಜೂ. 29: ‘ರಾಜ್ಯದಲ್ಲಿ ಸುಮಾರು ಎರಡು ಸಾವಿರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ, ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದಿಲ್ಲಿ ತಿಳಿಸಿದ್ದಾರೆ

ಬುಧವಾರ ಇಲ್ಲಿನ ಜಯನಗರದಲ್ಲಿ ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಅಗ್ನಿಶಾಮಕ ಠಾಣೆ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಅಗ್ನಿ ಅವಘಡಗಳಿಂದ ಜನತೆಯ ಪ್ರಾಣ ಹಾಗೂ ಆಸ್ತಿ-ಪಾಸ್ತಿಗಳ ರಕ್ಷಣೆಗೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ. ಅಗ್ನಿಶಾಮಕ ಇಲಾಖೆ ಆಧುನಿಕ ತಾಂತ್ರಿಕತೆಯನ್ನು ಬಳಕೆ ಮಾಡಿಕೊಳ್ಳಲಿದೆ' ಎಂದು ಹೇಳಿದರು.

‘ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಸರಕಾರ ಆದ್ಯತೆ ನೀಡುತ್ತದೆ ಹಾಗೂ ಹೆಚ್ಚಿನ ಹೆಚ್ಚಿನ ಅನುದಾನವನ್ನು ಒದಗಿಸಲಾಗುತ್ತಿದೆ. ಜೊತೆಗೆ ಇಲಾಖೆಗೆ ಅಗತ್ಯವಿರುವ ಸಿಬ್ಬಂದಿ ನೇಮಕಾತಿಯನ್ನು ಮಾಡಲಾಗುತ್ತಿದೆ. ಇದೇ ವೇಳೆ ನಮ್ಮ ಸಿಬ್ಬಂದಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News