ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Update: 2022-06-29 23:02 IST
ಬೆಂಗಳೂರು, ಜೂ.29: ನೈಋತ್ಯ ಮುಂಗಾರಿನ ಪರಿಣಾಮ ಜೂ.30 ಮತ್ತು ಜು.1ರಂದು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ (RAIN) ಸಾಧ್ಯತೆಯಿದ್ದು, ಈ ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿನಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಜೂ.30ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.