ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

Update: 2022-06-29 18:22 GMT
photo: rashtrapatisachivalaya.gov.in

ಹೊಸದಿಲ್ಲಿ, ಜೂ. 29: ಉಪ ರಾಷ್ಟ್ರಪತಿ ಚುನಾವಣೆ ಆಗಸ್ಟ್ 6ರಂದು ನಡೆಸಲಾಗುವುದು. ಅದೇ ದಿನ ಮತ ಎಣಿಕೆ ಕೂಡ ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ಹೇಳಿದೆ. 

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ದು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದೆ. 
ಉಪ ರಾಷ್ಟ್ರಪತಿ ಚುನಾವಣೆಗೆ ಜುಲೈ 5ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಜುಲೈ 19 ಆಗಿರಲಿದೆ. 
ನಾಮಪತ್ರಗಳ ಪರಿಶೀಲನೆ ಜುಲೈ 20ರಂದು ನಡೆಯಲಿದೆ. ನಾಮಪತ್ರ ಹಿಂದೆಗೆಯಲು ಕೊನೆಯ ದಿನಾಂಕ ಜುಲೈ 22  ಆಗಿರಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 
ಉಪ ರಾಷ್ಟ್ರಪತಿ ಆಯ್ಕೆ ಸಂಸತ್ತಿನ ಉಭಯ ಸದನಗಳ ಸದಸ್ಯರನ್ನು ಒಳಗೊಂಡಿರುವ ಮತದಾರರಿಂದ ನಡೆಯಲಿದೆ. 
ಈ ನಡುವೆ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News