ರಾಜ್ಯದಲ್ಲಿ ಬುಧವಾರ 1,249 ಮಂದಿಗೆ ಕೊರೋನ ದೃಢ; ಇಬ್ಬರು ಮೃತ್ಯು

Update: 2022-06-29 18:40 GMT

ಬೆಂಗಳೂರು, ಜೂ.29: ರಾಜ್ಯದಲ್ಲಿ ಬುಧವಾರ 1,249 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಇಬ್ಬರು ಮೃತಪಟ್ಟಿದ್ದು, 1,154 ಜನರು ಗುಣಮುಖರಾಗಿದ್ದಾರೆ. 

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,68,365ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,075ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 5,707ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. 

ಇಬ್ಬರ ಸಾವು: ಬೆಂಗಳೂರುನಗರ 1, ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಬ್ಬರು ಕೊರೋನದಿಂದಾಗಿ ಮೃತಪಟ್ಟಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,249 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 2, ಬಳ್ಳಾರಿ 12,ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 2, ಬೆಂಗಳೂರುನಗರ 1109, ಬೀದರ್ 1, ಚಿಕ್ಕಮಗಳೂರು 4, ದಕ್ಷಿಣಕನ್ನಡ 29, ದಾವಣಗೆರೆ 1, ಧಾರವಾಡ 13, ಹಾಸನ 6, ಹಾವೇರಿ 2, ಕಲಬುರಗಿ 2, ಕೋಲಾರ 5, ಮೈಸೂರು 31, ರಾಯಚೂರು 1, ಶಿವಮೊಗ್ಗ 5, ತುಮಕೂರು 6, ಉಡುಪಿ 6, ಉತ್ತರಕನ್ನಡ ಜಿಲ್ಲೆಯಲ್ಲಿ 8 ಪ್ರಕರಣ ಪತ್ತೆಯಾಗಿವೆ.


ರಾಜಧಾನಿಯಲ್ಲಿ 1,109 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಬುಧವಾರದಂದು 1,109 ಜನರಿಗೆ ಕೊರೋನ ಸೋಂಕು ದೃಢಪಟ್ಟಿವೆ. ಒಬ್ಬರು ಮೃತಪಟ್ಟಿದ್ದು, 1,093 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 1803107   ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,968 ಜನರು ಸೋಂಕಿಗೆ ಬಲಿಯಾಗಿದ್ದಾರೆ. 
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News