ಶಿವಮೊಗ್ಗ | ಹರ್ಷ ಹತ್ಯೆ ಪ್ರಕರಣ: ಎನ್ ಐಎಯಿಂದ ತನಿಖೆ ಚುರುಕು

Update: 2022-06-30 06:27 GMT

ಶಿವಮೊಗ್ಗ, ಜೂ.30: ಸುಮಾರು ನಾಲ್ಕು ತಿಂಗಳ ಹಿಂದೆ ನಡೆದ ಬಜರಂಗಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ(ಎನ್.ಐ.ಎ.)ದ ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ

 ಒಟ್ಟು 8 ವಾಹನಗಳಲ್ಲಿ ಬುಧವಾರ ಸಂಜೆ ಹೊತ್ತಿಗೆ ಶಿವಮೊಗ್ಗ ನಗರಕ್ಕೆ ರಾಷ್ಟ್ರೀಯ ತನಿಖಾ ದಳದ ಹಿರಿಯ ಅಧಿಕಾರಿಗಳು ಆಗಮಿಸಿದ್ದು, ಇಂದು ಹರ್ಷ ಕೊಲೆ ಪ್ರಕರಣದ ಆರೋಪಿಗಳ ಮನೆ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ಭೇಟಿ ಮಾಹಿತಿ ಕಲೆ ಹಾಕಿದ್ದಾರೆ.

ಈ ತಂಡದಲ್ಲಿ ಕೇರಳ, ಆಂಧ್ರ ಪ್ರದೇಶ, ತಮಿಳುನಾಡಿನ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ತನಿಖೆ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಕಳೆದ ಫೆಬ್ರವರಿ 20ರಂದು ಹರ್ಷ(28)ನ್ನು ದುಷ್ಕರ್ಮಿಗಳು ಕೊಲೆಗೈದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News