ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಸಾಧ್ಯತೆ

Update: 2022-06-30 09:56 GMT
Photo:PTI

ಮುಂಬೈ: ಸ್ವಂತ ಪಕ್ಷದ ಶಾಸಕರೇ ಬಂಡಾಯ ಎದ್ದ ಕಾರಣ ಶಿವಸೇನೆ ಮುಖ್ಯಸ್ಥ  ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ  ಬಿಜೆಪಿಯ ಮುಖಂಡ ದೇವೇಂದ್ರ ಫಡ್ನವಿಸ್  ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಮರಳಲು ಸಿದ್ಧರಾಗಿದ್ದಾರೆ. ಬಂಡಾಯದ  ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು NDTV ವರದಿ ಮಾಡಿದೆ.

ಫಡ್ನವಿಸ್ ಹಾಗೂ  ಶಿಂಧೆ ಅವರು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಇಂದು ಮಧ್ಯಾಹ್ನ ಭೇಟಿಯಾಗಲಿದ್ದಾರೆ.  ಸರಕಾರ ರಚಿಸುವ  ಹಕ್ಕನ್ನು ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಫಡ್ನವಿಸ್ ಅವರು ಶುಕ್ರವಾರ  ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಫಡ್ನವಿಸ್  2 ವರ್ಷಗಳ ಹಿಂದೆ ತರಾತುರಿಯಲ್ಲಿ ಮುಖ್ಯಮಂತ್ರಿ ಆಗಿ ಪ್ರಮಾಣ ಸ್ವೀಕರಿಸಿದ್ದರು. 4 ದಿನಗಳ ಬಳಿಕ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದರು.

ತಮ್ಮ ಬಹುಮತವನ್ನು ಸಾಬೀತುಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಉದ್ಧವ್ ಠಾಕ್ರೆ ಅವರು ನಿನ್ನೆ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News