ಚಲನ ಚಿತ್ರ ನಿರ್ಮಾಪಕ, ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ತಾಯಿ ನಿಧನ
Update: 2022-06-30 16:48 IST
ಮಂಗಳೂರು : ಬಿಜೈ ನೂಡುಲೈನ್ ರಸ್ತೆಯ ನಿವಾಸಿ ಮಾಧವಿ (91) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 30ರಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಜಯಕಿರಣ ಪತ್ರಿಕೆಯ ಮಾಲಕ, ಚಲನಚಿತ್ರ ನಿರ್ಮಾಪಕ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಸಹಿತ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.