ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ: ಸಿದ್ದರಾಮಯ್ಯ
ಬೆಂಗಳೂರು: ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿ, 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ನಮ್ಮ ಸಮೀಕ್ಷೆಯೂ ನಿರೀಕ್ಷೆಯಂತೆಯೇ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಬಿಜೆಪಿ ಏನೇ ಹೇಳಲಿ ಸ್ಪಷ್ಟಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಹಲವು ನಾಯಕರು ನನ್ನ ಸಂಪರ್ಕದಲ್ಲಿರುವುದು ನಿಜ. ಚುನಾವಣೆಗೆ 9 ತಿಂಗಳು ಇದೆ, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತದಲ್ಲಿ ನಂಬಿಕೆ ಇಟ್ಟು, ಪಕ್ಷದ ನಾಯಕತ್ವ ಒಪ್ಪಿಕೊಂಡು, ಪಕ್ಷಕ್ಕೆ ನಿಷ್ಠಾವಂತರಾಗಿ ಇರುವವರಿಗೆ ಟಿಕೇಟ್ ನೀಡುತ್ತೇವೆ ಎಂದು ತಿಳಿಸಿದ್ದಾರೆ.
'ರಾಜ್ಯದ ಒಂದೊಂದು ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ 10-12 ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಇದೇ ಸಮಸ್ಯೆಯಾಗಿದೆ. ಈ ಸಮಸ್ಯೆ ಬಿಜೆಪಿಗೆ ಇಲ್ಲ. ಅದು ನಮ್ಮಂತೆ ಇಡೀ ರಾಜ್ಯದಲ್ಲಿ ನೆಲೆ ಇರುವ ಪಕ್ಷ ಅಲ್ಲ. ಇದಕ್ಕಾಗಿ ನಮ್ಮಲ್ಲಿ ಗೆದ್ದವರನ್ನು ಆಪರೇಷನ್ ಕಮಲ ಮಾಡಿ ಬಿಜೆಪಿಯವರು ಹೊತ್ತುಕೊಂಡು ಹೋಗುತ್ತಾರೆ' ಎಂದು ಹೇಳಿದ್ದಾರೆ.
ಬಿಜೆಪಿಯಲ್ಲಿರುವವರೆಲ್ಲರೂ ಆರೆಸ್ಸೆಸ್ ಅಲ್ಲ
ಬಿಜೆಪಿಯಲ್ಲಿರುವವರೆಲ್ಲರೂ ಆರೆಸ್ಸೆಸ್ ಮೂಲದವರಲ್ಲ, ಉದಾಹರಣೆಗೆ ಸಚಿವ ಎಸ್.ಟಿ.ಸೋಮಶೇಖರ್ ಆರ್.ಎಸ್.ಎಸ್ ನವರಲ್ಲ. ಹೀಗೆ ಬಹಳ ಮಂದಿ ಇದ್ದಾರೆ. ಇದರ ಅರ್ಥ ಸೋಮಶೇಖರ್ ಮರಳಿ ಬರುತ್ತಾರೆ ಎಂದಲ್ಲ. ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ಸ್ವಾಗತ ಎಂದು ಹೇಳಿದ್ದಾರೆ.
ರಾಜ್ಯದ ಒಂದೊಂದು ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ 10-12 ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಇದೇ ಸಮಸ್ಯೆಯಾಗಿದೆ. ಈ ಸಮಸ್ಯೆ ಬಿಜೆಪಿಗೆ ಇಲ್ಲ. ಅದು ನಮ್ಮಂತೆ ಇಡೀ ರಾಜ್ಯದಲ್ಲಿ ನೆಲೆ ಇರುವ ಪಕ್ಷ ಅಲ್ಲ. ಇದಕ್ಕಾಗಿ ನಮ್ಮಲ್ಲಿ ಗೆದ್ದವರನ್ನು ಆಪರೇಷನ್ ಕಮಲ ಮಾಡಿ @BJP4Karnataka ಅವರು ಹೊತ್ತುಕೊಂಡು ಹೋಗುತ್ತಾರೆ. 5/8#Delhi
— Siddaramaiah (@siddaramaiah) June 30, 2022
ಬಿಜೆಪಿಯಲ್ಲಿರುವವರೆಲ್ಲರೂ ಆರ್.ಎಸ್.ಎಸ್ ಮೂಲದವರಲ್ಲ, ಉದಾಹರಣೆಗೆ ಸಚಿವ ಎಸ್.ಟಿ.ಸೋಮಶೇಖರ್ ಆರ್.ಎಸ್.ಎಸ್ ನವರಲ್ಲ. ಹೀಗೆ ಬಹಳ ಮಂದಿ ಇದ್ದಾರೆ. ಇದರ ಅರ್ಥ ಸೋಮಶೇಖರ್ ಮರಳಿ ಬರುತ್ತಾರೆ ಎಂದಲ್ಲ. ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ಸ್ವಾಗತ. 8/8#Delhi
— Siddaramaiah (@siddaramaiah) June 30, 2022