×
Ad

ಬೆಂಗಳೂರಿನ ಹಲವೆಡೆ ಮಳೆ: ಅಲ್ಲಲ್ಲಿ ರಸ್ತೆಗಳು ಜಲಾವೃತ

Update: 2022-06-30 20:44 IST

ಬೆಂಗಳೂರು, ಜೂ.30: ಬೆಂಗಳೂರು ನಗರದಲ್ಲಿ ದಿನ ಬಿಟ್ಟು ದಿನ ಮಳೆಯಾಗುತ್ತಿದೆ. (RAIN) ಗುರುವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಸಂಜೆ 7.15ರಿಂದ ಶುರುವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿಯಿತು.

ಮಳೆ ಸುರಿಯುವ ವೇಳೆಯಲ್ಲಿ ಕೆಲವರು, ಕೊಡೆ ಹಿಡಿದು ಹೆಜ್ಜೆ ಹಾಕಿದರು. ವಾಹನ ಸವಾರರು, ತಮ್ಮ ದ್ವಿಚಕ್ರ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅಂಗಡಿ–ಮಳಿಗೆಗಳಲ್ಲಿ ಆಶ್ರಯ ಪಡೆದುಕೊಂಡಿದ್ದ ದೃಶ್ಯಗಳು ಅಲ್ಲಲ್ಲಿ ಕಂಡು ಬಂದವು. 

ಕೆಂಗೇರಿ, ರಾಜರಾಜೇಶ್ವರಿ ನಗರ, ನಾಯಂಡಹಳ್ಳಿ, ದೀಪಾಂಜಲಿನಗರ, ಗಿರಿನಗರ, ಹನುಮಂತನಗರ, ಬಸವನಗುಡಿ, ವಿಜಯನಗರ, ರಾಜಾಜಿನಗರ, ಬಸವೇಶ್ವರನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರ, ಶೇಷಾದ್ರಿಪುರ, ಆರ್.ಟಿ.ನಗರ, ಗಾಂಧಿನಗರ, ಮೆಜೆಸ್ಟಿಕ್ ಹಾಗೂ ಸುತ್ತಮುತ್ತ ಮಳೆ ಸುರಿಯಿತು.

ಜೂ.1ರಿಂದ 30ರವರೆಗೆ ನಗರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ. 70 ಮಿಮೀ ಮಳೆ ಬದಲಾಗಿ 158 ಮಿಮೀ ಮಳೆಯಾಗಿದೆ. ಇದು ಶೇ.124 ವಾಡಿಕೆಗಿಂತ ಹೆಚ್ಚಾಗಿದೆ. ನಗರದಲ್ಲಿ ಮುಂದಿನ 4 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News