×
Ad

ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆ: ಅರ್ಜಿ ಆಹ್ವಾನ

Update: 2022-06-30 20:55 IST

ಮಂಗಳೂರು : ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.೫೦ರಷ್ಟು ಅಂಕ ಮತ್ತು ಡಿಪ್ಲೊಮಾ ವಿಭಾಗದ ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್, ಆಟೋ ಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‌ಸ್ಟುಮೆಂಟ್ ಟೆಕ್ನಾಲಜಿ ಹಾಗೂ ಇನ್‌ಫಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.೫೦ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು ಅಥವಾ ೨ ವರ್ಷದ ವೃತ್ತಿಪರ ಕೋರ್ಸ್‌ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ.೫೦ರಷ್ಟು ಅಥವಾ ಯಾವುದೇ ಪಿಯುಸಿ ವಿಭಾಗದಲ್ಲಿ ಶೇ.೫೦ರಷ್ಟು ಅಂಕಗಳೊಂದಿಗೆ ತೇರ್ಗಡೆ ಯಾಗಿರಬೇಕು.

ಅಭ್ಯರ್ಥಿಗಳು ೧೯೯೯ರ ಡಿ.೨೯ರಿಂದ ೨೦೦೫ರ ಜೂ.೨೯ರ ನಡುವೆ ಜನಿಸಿರಬೇಕು. ೧೭ ವರ್ಷ ೬ ತಿಂಗಳು ತುಂಬಿರುವ ಹಾಗೂ ೨೩ ವರ್ಷದೊಳಗಿನ ವಯೋಮಿತಿಯವರು ೨೫೦ ರೂ.ಶುಲ್ಕ ಪಾವತಿಸಿ ಅರ್ಜಿ ಪಡೆಯಬಹುದು.

ಸಂಪೂರ್ಣ ವಿವರ ಹಾಗೂ ಸೂಚನೆಗಳನ್ನು ವೆಬ್‌ಸೈಟ್ ಮೂಲಕ ನೋಡಬಹುದು ಹಾಗೂ ಆನ್‌ಲೈನ್‌ನಲ್ಲಿ ಮೂಲಕ ಜು.೫ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಉದ್ಯೋಗಾಧಿಕಾರಿ ಅಥವಾ ದೂ.ಸಂ: ೦೮೨೪-೨೪೫೭೧೩೯ನ್ನು ಸಂಪರ್ಕಿ ಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News