ಅನುದಾನಿತ ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಹುದ್ದೆ: ಭರ್ತಿಗೆ ಶಿಕ್ಷಣ ಇಲಾಖೆ ಸುತ್ತೋಲೆ

Update: 2022-06-30 17:20 GMT

ಬೆಂಗಳೂರು, ಜೂ.30: ಅನುದಾನಿತ ಪ್ರೌಢಶಾಲೆಗಳಲ್ಲಿ 2015ರ ಡಿ.31ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆಯನ್ನು ಮುಂದುವರಿಸಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ವಿ.ಶ್ರೀನಿವಾಸಮೂರ್ತಿ ಸುತ್ತೋಲೆಯನ್ನು ಹೊರಡಿಸಿದ್ದಾರೆ.

ಕೋವಿಡ್-19 ಉದ್ಭವಿಸಿದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಆರ್ಥಿಕ ಮಿತವ್ಯಯ ಸಾಧಿಸುವ ದೃಷ್ಠಿಯಿಂದ 2020-21ನೆ ಸಾಲಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಹೊಸದಾಗಿ ವೇತನಾನುದಾನಕ್ಕೆ ಒಳಪಡಿಸದಂತೆ ಹಾಗೂ ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದಂತೆ ಸೂಚನೆಗಳನ್ನು ನೀಡಲಾಗಿತ್ತು. 

ಆದರೆ, ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತ ನೀಡಿದ ಹಿನ್ನೆಲೆಯಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News