ಸುಳ್ಯ: ಮಧ್ಯ ರಾತ್ರಿ ಮತ್ತೆ ಕಂಪಿಸಿದ ಭೂಮಿ; ಎಚ್ಚರಗೊಂಡ ಜನತೆ

Update: 2022-07-01 02:31 GMT

ಸುಳ್ಯ: ಮಧ್ಯ ರಾತ್ರಿ ಮತ್ತೆ ಭೂಮಿ ಕಂಪಿಸಿದೆ. ಭೀಕರ ಶಬ್ದ ಮತ್ತು ಕಂಪನದಿಂದ ಮಲಗಿದ್ದ ಜನತೆ ಎಚ್ಚರಗೊಂಡಿದ್ದಾರೆ. ರಾತ್ರಿ 1.15ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಸಂಪಾಜೆ ಹಾಗು ಸಮೀಪದ ಪ್ರದೇಶ, ಸುಳ್ಯ ನಗರ ಸೇರಿ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ ಬಗ್ಗೆ ಜನರು ದೂರವಾಣಿಯ ಮೂಲಕ ಹಾಗು ಸಾಮಾಜಿಕ ಜಾಲತಾಣಗಳ ಮೂಲಕ ಅನುಭವ ಹಂಚಿ ಕೊಂಡಿದ್ದಾರೆ.

ಇದೀಗ ವಾರದಲ್ಲಿ ನಾಲ್ಕನೇ ಬಾರಿ ಭೂಮಿ ಕಂಪಿಸಿದ್ದು ಜನರ ಆತಂಕ ಹೆಚ್ಚಿದೆ. ಜೂ.25 ರಂದು ಬೆಳಗ್ಗೆ 9.10ಕ್ಕೆ 2.3 ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು. ಜೂ.28 ರಂದು ಎರಡು ಬಾರಿ ಭೂಮಿ ನಲುಗಿತ್ತು. ಬೆಳಗ್ಗೆ ರಿಕ್ಟರ್ ಸ್ಕೇಲ್‌ನಲ್ಲಿ 3 ತೀವ್ರತೆಯ ಹಾಗು ಸಂಜೆ 1.8 ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News