ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆ; ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ

Update: 2022-07-01 14:30 GMT
ಫೈಲ್‌ ಫೋಟೊ

ಉಡುಪಿ: ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆ ಯಂತೆ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮೀನುಗಾರರು ಹಾಗೂ ಪ್ರವಾಸಿಗರು ನದಿ ತೀರ ಮತ್ತು ಸಮುದ್ರಕ್ಕೆ ಇಳಿಯದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದೆ.

ಅದರಂತೆ ತಗ್ಗು ಪ್ರದೇಶ, ಕೆರೆ, ನದಿತೀರ ಹಾಗೂ ಸಮುದ್ರ ತೀರ ಪ್ರದೇಶ ಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗೃತಿ ವಹಿಸಬೇಕು. ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಿಗೆ ತಲುಪಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿ ಇರಬೇಕು.

ತಾಲೂಕು ಕಂಟ್ರೋಲ್ ರೂಮ್ ನಂ.: ಜಿಲ್ಲೆಯ ಎಲ್ಲಾ ತಾಲೂಕು ಕಂಟ್ರೋಲ್ ರೂಮ್‌ನ ದೂರವಾಣಿ ಸಂಖ್ಯೆ: ಉಡುಪಿ-೦೮೨೦-೨೫೨೦೪೧೭, ಬ್ರಹ್ಮಾವರ-೦೮೨೦-೨೫೬೦೪೯೪, ಕಾಪು-೦೮೨೦-೨೫೫೧೪೪೪, ಕುಂದಾಪುರ- ೦೮೨೫೪-೨೩೦೩೫೭, ಬೈಂದೂರು-೦೮೨೫೪-೨೫೧೬೫೭, ಕಾರ್ಕಳ- ೦೮೨೫೮- ೨೩೦೨೦೧, ಹೆಬ್ರಿ-೦೮೨೫೩-೨೫೦೨೦೧.

ಹೆಚ್ಚಿನ ಮಾಹಿತಿಗಾಗಿ ಉಚಿತ ಟೋಲ್ ಫ್ರೀ ಸಂಖ್ಯೆ:೧೦೭೭, ದೂ.ಸಂಖ್ಯೆ: ೦೮೨೦-೨೫೭೪೮೦೨ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News