×
Ad

ಜುಲೈ 2ರಂದು ಡಾ.ಫ.ಗು.ಹಳಕಟ್ಟಿ ಜನ್ಮದಿನಾಚರಣೆ

Update: 2022-07-01 20:06 IST

ಉಡುಪಿ, ಜು.1: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಫ.ಗು. ಹಳಕಟ್ಟಿ ಅವರ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಜುಲೈ 2ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯುಜಿಎ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸ ಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್.ಕಲ್ಮಾಡಿ ಮತ್ತಿತರರು ಉಪಸ್ಥಿತರಿರುವರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News