ಮನೆಯಂಗಳದಲ್ಲಿ ಜಾರಿ ಬಿದ್ದು ಮೃತ್ಯು

Update: 2022-07-01 15:42 GMT

ಮಣಿಪಾಲ, ಜು.೧: ವ್ಯಕ್ತಿಯೊಬ್ಬರು ಮನೆ ಅಂಗಳದಲ್ಲಿ ಅಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ ಘಟನೆ ಜು.1ರಂದು ಬೆಳಗ್ಗೆ ನಡೆದಿದೆ.

ಮೃತರನ್ನು ಕೆ.ಎಸ್.ರಮೇಶ್(೬೨) ಎಂದು ಗುರುತಿಸಲಾಗಿದೆ. ಇವರು ಮನೆಯ ಎದುರುಗಡೆ ಇರುವ ತೆಂಗಿನ ಮರದಿಂದ ಬಿದ್ದಿದ್ದ ತೆಂಗಿನ ಕಾಯಿ ಹೆಕ್ಕಲು ಮನೆಯ ಅಂಗಳದಲ್ಲಿ ನಡೆದುಕೊಂಡು ಹೋಗುತ್ತಿದ್ದು, ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದರೆನ್ನಲಾಗಿದೆ.

ಇದರಿಂದ ಗಂಭೀರವಾಗಿ ತಲೆಗೆ ಗಾಯಗೊಂಡ ಇವರು, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News