ವಲಸಿಗ ಕಾರ್ಮಿಕರ ಅನುಕೂಲಕ್ಕಾಗಿ ‘ಕಾರ್ಮಿಕ್’ ಅಪ್ಲಿಕೇಶನ್

Update: 2022-07-01 15:49 GMT

ಶಿರ್ವ: ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ವಲಸಿಗ ಕಾರ್ಮಿಕರು- ಗ್ರಾಹಕರ ಮಧ್ಯೆ ಸೇತುವೆಯಾಗಿ ಕೆಲಸ ಮಾಡುವ ‘ಕಾರ್ಮಿಕ್’ ಮೊಬೈಲ್ ಅಪ್ಲಿಕೇಶನ್ ನ್ನು ಬಂಟಕಲ್‌ನ ಶ್ರೀಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಭಿವೃದ್ದಿ ಪಡಿಸಿದ್ದಾರೆ.

ಸಾಮಾಜಿಕ ಆರ್ಥಿಕ ಕಾರಣಗಳಿಂದಾಗಿ ವಲಸೆ ಕಾರ್ಮಿಕರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಕೆಲಸಕ್ಕಾಗಿ ವಲಸೆ ಹೋಗುತ್ತಿರುತ್ತಾರೆ. ನಿರ್ಮಾಣ ಕ್ಷೇತ್ರದಲ್ಲಿನ ಮಾಹಿತಿಯ ಕೊರತೆಯಿಂದಾಗಿ ಅವರಲ್ಲಿ ಅನೇಕರು ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಕೆಲಸ ಪಡೆಯಲು ಸಾಧ್ಯವಾಗುವುದಿಲ್ಲ. ಇದರಿಂದ ಅನೇಕರು ನಿರುದ್ಯೋಗದ ಸಮಸ್ಯೆ ಎದುರಿಸಬೇಕಾಗುತ್ತದೆ. ಇದೇ ಸಮಯದಲ್ಲಿ ಗ್ರಾಹಕರು ಕೂಡ ಇದೇ ಸಮಸ್ಯೆಯನ್ನು ಎದುರಿಸಬೇಕಾ ಗುತ್ತದೆ. ಈ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಅಪ್ಲೆಕೇಶನ್ ಅಭಿವೃದ್ಧಿ ಪಡಿಸಲಾಗಿದೆ.

ಸಮೀಕ್ಷೆಯ ಮೂಲಕ ವಲಸೆ ಕಾರ್ಮಿಕರ ಮಾಹಿತಿಗಳನ್ನು ಸಂಗ್ರಹಿಸಿ ನಂತರ ಅದನ್ನು ಡೇಟಾಬೇಸ್ ಆಗಿ ಕಂಪೈಲ್ ಮಾಡುವ ಮೂಲಕ ಮೊಬೈಲ್ ಅಪ್ಲಿಕೇಶನ್ ಅನ್ನು ರಚಿಸಲಾಗುತ್ತದೆ. ಅದರಲ್ಲಿ ಅವರ ಹೆಸರು, ಅವರ ಯಾವ ವೃತ್ತಿ ಕೌಶಲ್ಯತೆ, ದೂರವಾಣಿ ಸಂಖ್ಯೆ ಮೊದಲಾದ ಮಾಹಿತಿಯನ್ನು ಒಳಗೊಂಡಿ ರುತ್ತದೆ.

ಈ ಯೋಜನೆಯನ್ನು ರೋಶನ್ ಎಸ್.ಕೋಟ್ಯಾನ್ ಮಾರ್ಗದರ್ಶನದಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಹರೀಶ್ ಆಚಾರ್ಯ, ಓಂಶ್ರೀ ಎಸ್.ಪೈ, ಅಬ್ದುಲ್ ಅಜೀಂ ಅಭಿವೃದ್ಧಿ ಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News