ವಿಎಚ್‌ಪಿ-ಬಜರಂಗದಳ ರ್‍ಯಾಲಿಯಲ್ಲಿ ಪ್ರಚೋದನಕಾರಿ ಘೋಷಣೆ: ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು

Update: 2022-07-01 17:11 GMT

     ಹೊಸದಿಲ್ಲಿ,ಜು.1: ಉದಯಪುರದಲ್ಲಿ ಟೈಲರ್ ವೃತ್ತಿಯ ಕನ್ನಯ್ಯ ಲಾಲ್ ಅವರ ಹಂತಕರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿ ಹರ್ಯಾಣದ ಗುರ್ಗಾಂವ್ನಲ್ಲಿ ಬುಧವಾರ ನಡೆದ ರ್ಯಾಲಿಯಲ್ಲಿ ನಿರ್ದಿಷ್ಟ ಸಮುದಾಯವೊಂದರ ವಿರುದ್ಧ ನಿಂದನಾತ್ಮಕ ಘೋಷಣೆಗಳನ್ನು ಕೂಗಿದ ಹಾಗೂ ಎರಡು ಸಮುದಾಯಗಳ ನಡುವೆ ಶತ್ರುತ್ವವನ್ನು ಪ್ರಚೋದಿಸಿದ ಆರೋಪದಲ್ಲಿ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

  ಈ ರ್ಯಾಲಿಯನ್ನು ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಆಯೋಜಿಸಿತ್ತು. ಈ ರ್ಯಾಲಿ ನಡೆದ ಎರಡು ದಿನಗಳ ಬಳಿಕ ಪೊಲೀಸರು ಸಂಘಟಕರ ವಿರುದ್ಧ ಭಾರತೀಯ ದಂಡಸಂಹಿತೆಯ 116, 153ಎ, 295ಎ,34 ಹಾಗೂ 505 ಸೆಕ್ಷನ್ಗಳಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
    ಜೂನ್ 29ರಂದು ಸಂಜೆ 5 ಗಂಟೆಯ ವೇಳೆಗೆ ಗುರ್ಗಾಂವ್ನ ನೆಹರೂ ಪಾರ್ಕ್ ನಲ್ಲಿ ಸುಮಾರು 80 ಜನರು ಜಮಾಯಿಸಿದ್ದರು ಹಾಗೂ ಆನಂತರ ಅವರು ಸದರ್ ಬಝಾರ್ ನೆಡೆಗೆ ಪಾದಯಾತ್ರೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಅವರು ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಾತ್ಮಕ ಘೋಷಣೆಗಳನ್ನು ಕೂಗಿದರೆಂದು ಆರೋಪಿಸಲಾಗಿದೆ.
 ಈ ರ್ಯಾಲಿಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆಂದು ಅಧಿಕೃತ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News