ಹಾವೇರಿ: ಸಂಘಪರಿವಾರದ ಪ್ರತಿಭಟನೆಯಲ್ಲಿ ಟೈರ್ ಸುಡುವ ವೇಳೆ ಕಾರ್ಯಕರ್ತರಿಗೆ ತಗುಲಿದ ಬೆಂಕಿ

Update: 2022-07-01 17:42 GMT

ಹಾವೇರಿ, ಜು.1: ರಾಜಸ್ಥಾನದಲ್ಲಿ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಸಂಘಪರಿವಾರ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಮೂವರು ಪ್ರತಿಟನಾಕಾರರ ಪ್ಯಾಂಟಿಗೆ ಬೆಂಕಿಯ ಕಿಡಿ ತಗುಲಿದ ಘಟನೆ ಹಾವೇರಿಯಲ್ಲಿ ನಡೆದಿದೆ. 

ಶುಕ್ರವಾರ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. 

ಪ್ರತಿಭಟನೆ ವೇಳೆ  ಟೈರ್ ಸುಡಲು ಪೊಲೀಸರು ಅವಕಾಶ ನೀಡದ್ದಕ್ಕೆ ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದೆ.  ಕಾರ್ಯಕರ್ತರು ತಂದಿಟ್ಟ ಟೈರ್‌ಗಳನ್ನು ಪೊಲೀಸರು ವಾಪಸ್ ಕಳಿಸಿದ್ದರೂ ಪೊಲೀಸರ ವಿರೋಧದ ನಡುವೆಯೂ ಟೈರ್‌ಗೆ ಬೆಂಕಿ ಹಚ್ಚಿದದ್ದಾರೆ. ಈ ವೇಳೆ  ಮೂವರು ಕಾರ್ಯಕರ್ತರ ಪ್ಯಾಂಟಿಗೆ ಬೆಂಕಿಯ ಕಿಡಿ ಹತ್ತಿಕೊಂಡಿದ್ದು, ಇದನ್ನು  ಗಮನಿಸಿದ ತಕ್ಷಣವೇ ಬೆಂಕಿಯನ್ನು ಕಾರ್ಯಕರ್ತರು ಆರಿಸಿದ್ದಾರೆ. ಇದರಿಂದ ಭಾರೀ ಅನಾಹುತವೊಂದು ತಪ್ಪಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News