ಕ್ಯಾಬಿನ್‌ನಲ್ಲಿ ಕಾಣಿಸಿಕೊಂಡ ಹೊಗೆ: ಜಬಲ್‌ಪುರಕ್ಕೆ ತೆರಳುತ್ತಿದ್ದ ಸ್ಪೈಸ್‌ಜೆಟ್ ವಿಮಾನ ದಿಲ್ಲಿಗೆ ವಾಪಸ್

Update: 2022-07-02 04:48 GMT
Photo:PTI

ಹೊಸದಿಲ್ಲಿ: ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡ ಕಾರಣ  ಜಬಲ್‌ಪುರಕ್ಕೆ ತೆರಳುತ್ತಿದ್ದ ಸ್ಪೈಸ್‌ಜೆಟ್‌ ವಿಮಾನ ಇಂದು ಬೆಳಗ್ಗೆ ದಿಲ್ಲಿ ವಿಮಾನ ನಿಲ್ದಾಣಕ್ಕೆ ಮರಳಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ವಿಮಾನವು 5,000 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದಾಗ ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದ್ದನ್ನು ಸಿಬ್ಬಂದಿ ಗಮನಿಸಿದರು.

“ದಿಲ್ಲಿಯಿಂದ ಜಬಲ್‌ಪುರಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದ ಸ್ಪೈಸ್‌ಜೆಟ್ ವಿಮಾನದ ಕ್ಯಾಬಿನ್ ನಲ್ಲಿ ಹೊಗೆ ಇರುವುದನ್ನು ಸಿಬ್ಬಂದಿ ಗಮನಿಸಿದರು. ಹೀಗಾಗಿ ವಿಮಾನವು ಇಂದು ಬೆಳಗ್ಗೆ ದಿಲ್ಲಿ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಮರಳಿತು.  ಪ್ರಯಾಣಿಕರು ಸುರಕ್ಷಿತವಾಗಿ ಇಳಿದರು" ಎಂದು ಸ್ಪೈಸ್‌ಜೆಟ್ ವಕ್ತಾರರು ಎಎನ್‌ಐ ಗೆ ತಿಳಿಸಿದ್ದಾರೆ.

ಹೊಗೆ ತುಂಬಿದ ವಿಮಾನದ  ಕ್ಯಾಬಿನ್  ದೃಶ್ಯವನ್ನು  ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ. ವಿಮಾನವು ದಿಲ್ಲಿಗೆ ಹಿಂದಿರುಗಿದ ನಂತರ ಪ್ರಯಾಣಿಕರು ನಿರ್ಗಮಿಸುತ್ತಿರುವುದು ಈ ದೃಶ್ಯದಲ್ಲಿ ಕಂಡುಬಂದಿದೆ.

ಸ್ಪೈಸ್ ಜೆಟ್ ವಿಮಾನ 15 ದಿನಗಳಲ್ಲಿ ಇಂದು ಎರಡನೇ ಬಾರಿ ತುರ್ತು ಲ್ಯಾಂಡಿಂಗ್ ಆಗಿದೆ. ಜೂನ್ 19 ರಂದು  185 ಪ್ರಯಾಣಿಕರೊಂದಿಗೆ ದಿಲ್ಲಿಗೆ ಹೊರಟಿದ್ದ ವಿಮಾನವು ಟೇಕ್-ಆಫ್ ಆದ ತಕ್ಷಣ ಪಾಟ್ನಾದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಆಗ, ಅದರ ಎಡ ಇಂಜಿನ್‌ಗೆ ಹಕ್ಕಿ ಹೊಡೆದ ನಂತರ ಬೆಂಕಿ ಕಾಣಿಸಿಕೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News