ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮುಹಮ್ಮದ್ ಝುಬೈರ್ ವಿರುದ್ಧ ಹೊಸ ಆರೋಪ ಹೊರಿಸಿದ ದಿಲ್ಲಿ ಪೊಲೀಸರು

Update: 2022-07-02 07:45 GMT

ಹೊಸದಿಲ್ಲಿ: 2018ರಲ್ಲಿ ಆಕ್ಷೇಪಾರ್ಹ ಟ್ವೀಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮುಹಮ್ಮದ್ ಝುಬೈರ್ ವಿರುದ್ಧ ದಿಲ್ಲಿ ಪೊಲೀಸರು ಹೊಸ ಆರೋಪಗಳನ್ನು ಸೇರಿಸಿದ್ದಾರೆ.

ಹೊಸ ಆರೋಪಗಳಲ್ಲಿ ಕ್ರಿಮಿನಲ್ ಪಿತೂರಿ ಹಾಗೂ  ಸಾಕ್ಷ್ಯ ನಾಶವೂ ಸೇರಿದೆ ಎಂದು NDTV ವರದಿ ಮಾಡಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 201 (ಸಾಕ್ಷ್ಯ ನಾಶ), 120 ಬಿ (ಕ್ರಿಮಿನಲ್ ಪಿತೂರಿ) ಹಾಗೂ ವಿದೇಶಿ ದೇಣಿಗೆ ಪಡೆದ ಆರೋಪದ ಮೇಲೆ ವಿದೇಶಿ ಕೊಡುಗೆ ನಿಯಂತ್ರಣ ಕಾಯಿದೆ (ಎಫ್ ಸಿ ಆರ್ ಎ) ಸೆಕ್ಷನ್ 35 ಅನ್ನು ದಿಲ್ಲಿ ಪೊಲೀಸರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಝುಬೈರ್ ಅವರು 2018ರಲ್ಲಿ ಮಾಡಿದ ಟ್ವೀಟ್ ಒಂದು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂಬ ಆರೋಪ ಹೊರಿಸಿ ದಿಲ್ಲಿ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News