ಪೌರ ಕಾರ್ಮಿಕರ ಖಾಯಂ | ಪೌರ ಕಾರ್ಮಿಕರ -ಅಧಿಕಾರಿಗಳ ಜಂಟಿ ಸಮಿತಿ ಶಿಫಾರಸು ಮಾಡಿದ ಕೂಡಲೇ ಕ್ರಮ: ಸಿಎಂ ಬೊಮ್ಮಾಯಿ

Update: 2022-07-02 06:02 GMT

ಪೌರ ಕಾರ್ಮಿಕರ -ಅಧಿಕಾರಿಗಳ ಜಂಟಿ ಸಮಿತಿ ಶಿಫಾರಸು ಮಾಡಿದ ಕೂಡಲೇ ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು, ಜು.2: ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ತಾತ್ವಿಕವಾಗಿ ಸರಕಾರ ಒಪ್ಪಿಕೊಂಡಿದೆ. ಕಾನೂನಾತ್ಮಕವಾಗಿ ಹಾಗೂ ತಾಂತ್ರಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪೌರ ಕಾರ್ಮಿಕರ ಹಾಗೂ ಅಧಿಕಾರಿಗಳ ಜಂಟಿ ಸಮಿತಿಯನ್ನು ರೂಪಿಸಲಾಗಿದೆ. ಸಮಿತಿ ಶಿಫಾರಸು ಮಾಡಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

 ಪೌರಕಾರ್ಮಿಕರ ಸಂರಕ್ಷಣೆಗೆ  ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲ ದೃಷ್ಟಿಯಿಂದ ಖಾಯಂ ಆಗಿ ಸುರಕ್ಷತೆ ನೀಡಲು ಒಪ್ಪಲಾಗಿದೆ. ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು.  ಸೌಹಾರ್ದದಿಂದ ಸಮಸ್ಯೆಯನ್ನು  ಬಗೆಹರಿಸಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News