ಬಂಟ್ವಾಳ | ಕಾರುಗಳ ನಡುವೆ ಢಿಕ್ಕಿ: ಚಾಲಕ ಗಂಭೀರ, ಹಲವರಿಗೆ ಸಣ್ಣಪುಟ್ಟ ಗಾಯ

Update: 2022-07-02 06:15 GMT

ಬಂಟ್ವಾಳ, ಜು.2: ಬಿ.ಸಿ.ರೋಡ್- ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯ ಬಡಗುಂಡಿ ಎಂಬಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಎರಡು ಕಾರುಗಳ ನಡುವಿನ ಅಪಘಾತದಲ್ಲಿ ಕಾರು ಚಾಲಕನೋರ್ವ ಗಂಭೀರ ಗಾಯಗೊಂಡಿದ್ದಾರೆ.

ನಯನಾಡು ನಿವಾಸಿ ಬ್ಯಾಪ್ಟಿಸ್ ಲೋಬೊ ಎಂಬವರ ಪುತ್ರ ಚಾಲಕ ರಾಕ್ಲಿನ್ ಲೋಬೊ(26) ಗಂಭೀರ ಗಾಯಗೊಂಡ ಕಾರು ಚಾಲಕ. ಕಾರಿನಲ್ಲಿದ್ದ ಇತರ ಪ್ರಯಾಣಿಕರಿಗೂ ಗಾಯಗಳಾಗಿದ್ದು ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾವೂರ ಸಮೀಪದ ಬಡಗುಂಡಿ ಎಂಬಲ್ಲಿ ಮಂಗಳೂರಿನಿಂದ ಪುಂಜಾಲಕಟ್ಟೆ ನಯನಾಡು ಮನೆಗೆ ರಾಕ್ಲಿನ್ ರಿಟ್ಝ್ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ವಾಮದಪದವಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಂಜೇಶ್ವರಕ್ಕೆ ಹೋಗುತ್ತಿದ್ದ ಎರಿಟಿಗ ಕಾರು ನಡುವೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಎರಿಟಿಗ ಕಾರಿನಲ್ಲಿ 12 ಮಂದಿ ಪ್ರಯಾಣಿಕರಿದ್ದರೆನ್ನಲಾಗಿದ್ದು, ಎಲ್ಲರಿಗೂ ಗಾಯಗಳಾಗಿವೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News