ಮುಹಮ್ಮದ್ ಝುಬೈರ್ ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

Update: 2022-07-02 09:35 GMT
Photo: twitter

ಹೊಸದಿಲ್ಲಿ: 2018ರಲ್ಲಿ ಮಾಡಿದ್ದ ಆಕ್ಷೇಪಾರ್ಹ ಟ್ವೀಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಫ್ಯಾಕ್ಟ್ ಚೆಕಿಂಗ್   ಸೈಟ್ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮುಹಮ್ಮದ್ ಝುಬೈರ್   ಸಲ್ಲಿಸಿದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತು ಹಾಗೂ  ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು.

ಕ್ರಿಮಿನಲ್ ಪಿತೂರಿ ಹಾಗೂ  ಸಾಕ್ಷ್ಯ ನಾಶ ಆರೋಪಗಳನ್ನು ಎಫ್ ಐಆರ್ ಗೆ ಸೇರಿಸುವ ಜೊತೆಗೆ  ವಿದೇಶಿ ದೇಣಿಗೆ ಪಡೆದ ಆರೋಪದ ಮೇಲೆ ವಿದೇಶಿ ಕೊಡುಗೆ ನಿಯಂತ್ರಣ ಕಾಯಿದೆ (ಎಫ್ ಸಿ ಆರ್ ಎ) ಸೆಕ್ಷನ್ 35 ಅನ್ನು ಸೇರಿಸಲಾಗಿದೆ ಎಂದು ದಿಲ್ಲಿ ಪೊಲೀಸರು ಪಟಿಯಾಲಾ ಹೌಸ್ ನ್ಯಾಯಾಲಯಕ್ಕೆ ತಿಳಿಸಿದರು.

ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ದಿಲ್ಲಿ ಪೊಲೀಸರು ಜೂನ್ 27ರಂದು ಝುಬೈರ್ ಅವರನ್ನು ಬಂಧಿಸಿದ್ದರು. ಅದೇ ದಿನ ವಿಚಾರಣಾ ನ್ಯಾಯಾಲಯವು ಒಂದು ದಿನ ಪೊಲೀಸ್ ಕಸ್ಟಡಿಗೆ ಕಳುಹಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News