ಸಿಎಂ ಅಭ್ಯರ್ಥಿಗಳನ್ನು ಘೋಷಿಸಿ: ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಸಿ. ಎಂ. ಇಬ್ರಾಹಿಂ ಸವಾಲು

Update: 2022-07-02 11:26 GMT
ಸಿ. ಎಂ. ಇಬ್ರಾಹಿಂ 

ಬೆಂಗಳೂರು: ನಿಮಗೆ ತಾಕತ್ತಿದ್ದರೆ ಮುಂದಿನ ಮುಖ್ಯಮಂತ್ರಿ ಯಾರೆಂದು ಈಗಲೇ ಘೋಷಣೆ ಮಾಡಿ ಎಂದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸವಾಲು ಹಾಕಿದ್ದಾರೆ. 

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ಕಾಂಗ್ರೆಸ್ ನವರು ಸಿಎಂ ಅಭ್ಯರ್ಥಿ ಯಾರೆಂದು ಘೋಷಣೆ ಮಾಡಿಲ್ಲ. ಬಿಜೆಪಿಯವರು ಕೂಡ ಸಿಎಂ ಅಭ್ಯರ್ಥಿ ಯಾರು ಎಂದು ಹೇಳಿಲ್ಲ. ಕುಮಾರಸ್ವಾಮಿ ಅವರು ಸಿಎಂ ಅಭ್ಯರ್ಥಿ ಎಂದು ನಾವು ಹೇಳಿದ್ದೇವೆ. ನಿಮಗೆ ತಾಕತ್ ಇದ್ದರೆ ಸಿಎಂ ಅಭ್ಯರ್ಥಿ ಹೆಸರು ಘೋಷಣೆ ಮಾಡಿ ಎಂದು ಹೇಳಿದರು.

ಸಿದ್ದರಾಮಯ್ಯನವರ ಕಾರ್ಯಕ್ರಮ ಹಾಳು ಮಾಡಲು ಹುನ್ನಾರ ನಡೆಸಿದ್ದಾರೆ ಅಂತ ಆರೋಪ ಮಾಡ್ತಿದ್ದಾರೆ. ಜನತಾ ದಳ ಅಸ್ತಿತ್ವದಲ್ಲಿ ಇಲ್ಲ ಅಂತೀರಿ, ಹಾಗಾದರೆ ನಮ್ಮ ಮೇಲೆ ಭಯ ಯಾಕೆ? ಎಂದು ಪ್ರಶ್ನಿಸಿದ ಅವರು, ದೇವೇಗೌಡರ ಬಗ್ಗೆ ಮಾತನಾಡಿರುವ ರಾಜಣ್ಣನವರು ಕ್ಷಮೆ ಕೇಳುತ್ತಾರೆ ಎಂದು ಭಾವಿಸಿದ್ದೆ. ಆದರೆ, ಅವರು ಉಲ್ಟಾ ಮಾತನಾಡಿದ್ದಾರೆ. ರಾಜಣ್ಣನವರು ಕ್ಷಮೆ ಕೇಳಬೇಕು. ನಾಳೆ ರಾಜ್ಯದಲ್ಲಿ ಏನು ಬೇಕಾದರೂ ಆಗಬಹುದು. ಏನಾದರೂ ಅಹಿತಕರ ಘಟನೆ ನಡೆದರೆ ಅದಕ್ಕೆ ನಾವು ಹೊಣೆಯಲ್ಲ ಎಂದು ಪರೋಕ್ಷವಾಗಿ ರಾಜಣ್ಣನವರಿಗೆ ಎಚ್ಚರಿಕೆ ನೀಡಿದರು. 

ಕಾಂಗ್ರೆಸ್ ಗೆ 110 ಕಡೆ ಅಭ್ಯರ್ಥಿ ಇಲ್ಲವೆಂದು ಅವರೇ ಒಪ್ಪಿಕೊಂಡಿದ್ದಾರೆ. ನಮ್ಮದು ಒಕ್ಕಲುತನ ಮಾಡುವ ಪಾರ್ಟಿ, ಬಡವರ ಪಾರ್ಟಿ ಎಂದು ಕಾಂಗ್ರೆಸ್ ಸಮೀಕ್ಷೆಗಳ ಬಗ್ಗೆ ವ್ಯಂಗ್ಯವಾಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News