ಕ್ರಾಂತಿಕಾರಿ ಸುಭಾಶ್ಚಂದ್ರ ಬೋಸ್ ಆದರ್ಶ ಮೈಗೂಡಿಸಿಕೊಳ್ಳಿ: ರಾಮಕೃಷ್ಣ

Update: 2022-07-02 13:24 GMT

ಉಡುಪಿ, ಜು.೨: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ, ರಾಷ್ಟ್ರೀಯವಾದಿ ನೇತಾಜಿ ಸುಭಾಶ್ಚಂದ್ರ ಬೋಸ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ದೇಹತ್ಯಾಗ ಮಾಡಿದವರು. ದೇಶಕ್ಕಾಗಿ ಅವರ ತ್ಯಾಗ, ಹೋರಾಟ, ಛಲ ಇಂದಿನ ಪೀಳಿಗೆಗೆ ಆದರ್ಶಪ್ರಾಯವಾಗಿದ್ದು, ಅವರ ಜೀವನಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಷ್ಟ್ರ ಗೌರವ ಸಂರಕ್ಷಣಾ ಪರಿಷತ್‌ನ ಕರ್ನಾಟಕ ಸಮಿತಿಯ ಅಧ್ಯಕ್ಷ ಟಿ.ಎನ್.ರಾಮಕೃಷ್ಣ ಹೇಳಿದ್ದಾರೆ.

ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಘಟಕದ ಸಹಯೋಗದೊಂದಿಗೆ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ಆಜಾದ್ ಹಿಂದ್ ಸರಕಾರದ ೭೫ನೇ ವಾರ್ಷಿಕೋತ್ಸವ ಹಾಗೂ ನೇತಾಜಿ ಸುಭಾಶ್ಚಂದ್ರ ಬೋಸ್ ಅವರ ೧೨೫ನೇ ಜನ್ಮಶತಾಬ್ದಿ ಆಚರಣೆಯ ಅಂಗವಾಗಿ ಕಾಲೇಜಿನ ಸಭಾಂಗಣ ದಲ್ಲಿ ಆಯೋಜಿಸಿದ್ದ ನೇತಾಜಿ ಸುಭಾಶ್ಚಂದ್ರ ಬೋಸ್‌ರ ಜೀವನತತ್ವಗಳು ಎಂಬ ವಿಷಯದ ಕುರಿತ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಘವೇಂದ್ರ ಎ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ.ರಮೇಶ್ ಟಿ.ಎಸ್.,  ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕ ಡಾ. ವಿನಯ್ ಕುಮಾರ್ ಉಪಸ್ಥಿತರಿದ್ದರು.  ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.

ಕಾಲೇಜಿನ  ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಜಯಲಕ್ಷ್ಮಿ ಕಾರ್ಯಕ್ರಮ ನಿರ್ವಹಿಸಿ, ಸುಮಲತಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News