ನಾಗಮೋಹನದಾಸ್ ಆಯೋಗದ ವರದಿಗ ಜಾರಿಗೆ ಆಗ್ರಹ

Update: 2022-07-02 13:38 GMT

ಮಂಗಳೂರು: ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿ ನ್ಯಾ.ಎಚ್. ಎನ್. ನಾಗಮೋಹನ ದಾಸ್ ಆಯೋಗ ನೀಡಿರುವ ವರದಿಯನ್ನು ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಕರ್ನಾಟಕ ಸ್ವಾಭಿಮಾನಿ ಎಸ್‌ಸಿ ಎಸ್‌ಟಿ ಸಂಘಟನೆಗಳ ಒಕ್ಕೂಟ ಹಾಗೂ ಮೀಸಲಾತಿ ಹೆಚ್ಚಳ ಕ್ರಿಯಾ ಸಮಿತಿ ವಕ್ತಾರ ಲೋಲಾಕ್ಷ ಒತ್ತಾಯಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಸಮುದಾಯದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಬೇಡಿಕೆ ಈಡೇರದೆ ಇದ್ದರೆ ಜು.೧೨ರಂದು ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ. ಮೀಸಲಾತಿ ಪ್ರಮಾಣ  ಹೆಚ್ಚಿಸಬೇಕೆಂದು ಒತಾತಿಯಿಸಿ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ೧೪೩ ದಿನಗಳನ್ನು ಪೂರೈಸಿದೆ ಎಂದರು.

ದಲಿತ ಸಮುದಾಯಗಳ ಮಠಾಧಿಪತಿಗಳು, ದಲಿತ ಸಂಘಟನೆಗಳು ಮತ್ತು ಚಿಂತಕರು ಧರಣಿಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ. ರಾಜ್ಯದ ಶಾಸಕರು, ಸಂಸದರು ಧರಣಿ ಸ್ಥಳದಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಮೀಸಲಾತಿ ಹೆಚ್ಚಳದ ಭರವಸೆ ನೀಡಿದ್ದಾರೆ. ಆದರೆ ಅದು ಇನ್ನೂ ಜಾರಿಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೇಣುಕಾಚಾರ್ಯ ಅವರೇ ನಕಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವುದು ದಲಿತರ ಮೀಸಲಾತಿ ದುರುಪಯೋಗವಾಗುತಿತಿರುವುದಕ್ಕೆ ಉದಾಹರಣೆಯಾಗಿದೆ. ಇಂದಿನ ಸ್ಥಿತಿಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಲೇಬೇಕು ಎಂಬ ಹಕ್ಕೊತಾತಿಯ ತಮ್ಮ  ಸಮುದಾಯದ್ದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧರಣಿ ಸತ್ಯಾಗ್ರಹದ ೧೦೮ನೇ ದಿನದಂದು ಸ್ವಾಮೀಜಿಯವರನ್ನು ಭೇಟಿ ಮಾಡಿದಾಗ ಸ್ಪಷ್ಟವಾಗಿ ತಿಳಿಸಲಾಗಿದೆ. ಆದರೆ ಮುಖ್ಯಮಂತ್ರಿಗಳು ಈ ಬಗ್ಗೆ ಇದುವರೆಗೂ ಕ್ರಮ ಕೈಗೊಂಡಿಲ್ಲ. ಅವರ ಈ ವಿಳಂಬ ಧೋರಣೆಗೆ ಸರಕಾರ ಮತ್ತು ಅವರ ಪಕ್ಷ ಬೆಲೆ ತೆರಬೇಕಾದೀತು ಎಂದು ಎಚ್ಚರಿಸಿದರು.

ಪಾಣಾರ ಯಾನೆ ನಲಿಕೆ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಪದ್ಮನಾಭ ಮೂಡುಬಿದಿರೆ, ಬಾಕುಡ ಸಮಾಜದ ಜಿಲ್ಲಾ ಮುಖಂಡ ಪದ್ಮನಾಭ ನರಿಂಗಾನ, ದ.ಕ. ಜಿಲ್ಲಾ ಎಸ್‌ಸಿ, ಎಸ್‌ಟಿ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಮೋಹನಾಂಗಯ್ಯ ಸ್ವಾಮಿ, ದ.ಕ. ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷ ಬಿ. ಕೆ. ಸೇಸಪ್ಪ ಬೆದ್ರಕಾಡು, ಮಿಜಾರ್ ಶ್ರೀ ಸತ್ಯಸಾರಮಾನಿ ಮೂಲಸ್ಥಾನ ಜೀಣೋದ್ಧಾರ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಅಣ್ಣಯ್ಯ ಮಲ್ಲೂರು, ಬಂಟ್ವಾಳ ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News