ಗ್ರಾಪಂ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣಾಧಿಕಾರಿಗಳ ನೇಮಕ

Update: 2022-07-02 14:56 GMT

ಉಡುಪಿ : ಬ್ರಹ್ಮಾವರ ತಾಲೂಕು ಹೆಗ್ಗುಂಜೆ ಗ್ರಾಪಂನ ಅಧ್ಯಕ್ಷ ಸ್ಥಾನಕ್ಕೆ ಹಾಗೂ ವಾರಂಬಳ್ಳಿ ಗ್ರಾಪಂನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ, ಉಪ್ಪೂರು ಗ್ರಾಪಂನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಕೊಕ್ಕರ್ಣೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ದೇವೇಂದ್ರ ಕೆ ಮೋಗೆರ, ನಾಲ್ಕೂರು ಗ್ರಾಪಂನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಗಾಗಿ ಸಾಬ್ರಕಟ್ಟೆ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿ ಡಾ. ಪ್ರದೀಪ್ ಕುಮಾರ್ ಎನ್. ಕೋಡೋಂಜಿ ಅವರನ್ನು ಚುನಾವಣಾಧಿಕಾರಿ ಗಳಾಗಿ ನೇಮಕ ಮಾಡಲಾಗಿದೆ.

ಅದೇ ರೀತಿ ಕುಂದಾಪುರ ತಾಲೂಕು ಅಂಪಾರು ಗ್ರಾಪಂನ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಗೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಸಂದೇಶ್ ಹಾಗೂ ಬೈಂದೂರು ತಾಲೂಕು ಕಾಲ್ತೋಡು ಗ್ರಾಪಂನ ಅಧ್ಯಕ್ಷ ಸ್ಥಾನಕ್ಕೆ  ಆಯ್ಕೆ ನಡೆಸುವ ಸಲುವಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ಅಧಿಕಾರಿ ಪರಶುರಾಮ ಎಂ ಮುತ್ತಪ್ಪಗೋಳ ಅವರನ್ನು ಚುನಾವಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News