ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅವಧಿ ವಿಸ್ತರಣೆ

Update: 2022-07-02 15:01 GMT

ಉಡುಪಿ, ಜು.೨: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ -https://ssp.karnataka.gov.in- ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ ೮ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ - https://dom.karnataka.gov.in/udupi/public-, ಸಹಾಯವಾಣಿ ಸಂಖ್ಯೆ :೮೨೭೭೭೯೯೯೯೦ ಅಥವಾ ಉಡುಪಿ ದೂ.ಸಂಖ್ಯೆ: ೦೮೨೦-೨೫೭೪೫೯೬, ಕಾರ್ಕಳ ದೂ.ಸಂಖ್ಯೆ : ೦೮೨೫೮-೨೩೧೧೦೧ ಹಾಗೂ ಕುಂದಾಪುರ ದೂ.ಸಂಖ್ಯೆ: ೦೮೨೫೪-೨೩೦೩೭೦ ತಾಲೂಕು ಮಾಹಿತಿ ಕೇಂದ್ರ ಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News