ಜು.3ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Update: 2022-07-02 15:18 GMT

ಭಟ್ಕಳ: ಜುಲೈ 3ರಿಂದ 7ರ ವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆಗಳನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮೀನುಗಾರರು ಹಾಗೂ ಪ್ರವಾಸಿಗರು ಅಗತ್ಯ ಮುಂಜಾಗೃತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ ಎಂದು  ಭಟ್ಕಳ ತಹಶೀಲ್ದಾರ್ ಸುಮಂತ್ ಬಿ.ಇ., ಪ್ರಕಟಣೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಸಾರ್ವಜನಿಕರು, ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಮಳೆ ಗಾಳಿ ಬೀಸುವ ಸಂದರ್ಭದಲ್ಲಿ ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ ಹಾಗೂ ಮರಗಳ ಬಳಿ ನಿಲ್ಲದೆ ಸುರಕ್ಷಿತ ಸ್ಥಳಗಳನ್ನು ಆಶ್ರಯಿಸಬೇಕೆಂದು ಅವರು ತಿಳಿಸಿದ್ದಾರೆ.

ಯಾವುದೇ ಅನಾಹುತ ಸಂಭವಿಸಿದ್ದಲ್ಲಿ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಮ್ 1077, ಲ್ಯಾಂಡ್ ಲೈನ್ ಸಂಖ್ಯೆ ೦೮೩೮೨೨೨೯೮೫೭, ವಾಟ್ಸಪ್ ನಂಬರ್ ೯೪೮೩೫೧೧೦೧೫ ಗೆ ಸಂಪರ್ಕಿಸುವಂತೆ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News