ಮಣಿಪುರ: ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 24ಕ್ಕೇರಿಕೆ

Update: 2022-07-02 15:22 GMT

ಇಂಫಾಲ,ಜು.2: ಮಣಿಪುರದ ನೊನಿ ಜಿಲ್ಲೆಯ ತುಪುಲ್ ಎಂಬಲ್ಲಿ ರೈಲು ಮಾರ್ಗ ನಿರ್ಮಾಣ ಸ್ಥಳದಲ್ಲಿ ಶುಕ್ರವಾರ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಶನಿವಾರ 24ಕ್ಕೇರಿದ್ದು, ಇನ್ನೂ 38 ಮಂದಿ ನಾಪತ್ತೆಯಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

     ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ಸ್ಥಳದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ತಂಡಗಳನ್ನು ನಿಯೋಜಿಸಲಾಗಿದೆಯೆಂದು ಅವರು ಹೇಳಿದ್ದಾರೆ.
 ಸೇನೆ, ಅಸ್ಸಾಂ ರೈಫಲ್ಸ್, ಪ್ರಾಂತೀಯ ಸೇನೆ,ಎಸ್ಡಿಆರ್ಎಫ್ ಹಾಗೂ ಎನ್ಡಿಆರ್ಎಫ್ ಪಡೆಗಳು ಸ್ಥಳದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಿವೆಯೆಂದು ರಕ್ಷಮಾ ವಕ್ತಾರರೊಬ್ಬರು ಗುವಾಹಟಿಯಲ್ಲಿ ತಿಳಿಸಿದ್ದಾರೆ.

 ಮಣ್ಣಿನ ರಾಶಿಯಲ್ಲಿ ಸಿಲುಕಿಕೊಂಡಿರಬಹುದಾದವರನ್ನು ಪತ್ತೆಹಚ್ಚ ವಾಲ್ ರಾಡಾರ್ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗಿದೆ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ಶ್ವಾನವೊಂದನ್ನು ಕೂಡಾ ನಿಯೋಜಿಸಲಾಗಿದೆ ಎಂದವರು ಹೇಳಿದ್ದಾರೆ.
ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಈವರೆಗೆ ಪ್ರಾಂತೀಯ ಸೇನೆಯ 13 ಸಿಬ್ಬಂದಿ ಹಾಗೂ ಐವರು ನಾಗರಿಕರನ್ನು ಸುರಕ್ಷಿತವಾಗಿ ಪಾರು ಮಾಡಲಾಗಿದೆ. 18 ಮಂದಿ ಪ್ರಾಂತೀಯ ಸೇನಾ ಸಿಬ್ಬಂದಿ ಹಾಗೂ ಆರು ನಾಗರಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದವರು ಹೇಳಿದರು.

ನಾಪತ್ತೆಯಾಗಿರುವ 12 ಮಂದಿ ಪ್ರಾಂತೀಯ ಸೇನಾ ಸಿಬ್ಬಂದಿ ಹಾಗೂ 26 ನಾಗರಿಕರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿರುವುದಾಗಿ ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News